ಬಾಬ್ರಿ ಧ್ವಂಸ ಪ್ರಕರಣ: ಐವರು ಆರೋಪಿಗಳು ಕೋರ್ಟ್ ಗೆ ಶರಣು, ಬಳಿಕ ಜಾಮೀನು
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ವಿಶೇಷ ಕೋರ್ಟ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಶನಿವಾರ.....

Published On :
ಲಖನೌ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ವಿಶೇಷ ಕೋರ್ಟ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಶನಿವಾರ ಐವರು ಆರೋಪಿಗಳು ಕೋರ್ಟ್ ಮುಂದೆ ಶರಣಾಗಿ ಜಾಮೀನು ಪಡೆದುಕೊಂಡಿದ್ದಾರೆ.
ಆರೋಪಿಗಳಾದ ರಾಮ್ ವಿಲಾಸ್ ವೇದಾಂತಿ, ಚಂಪತ್ ರೈ ಬನ್ಸಾಲ್, ಮಹಾಂತ್ ನೃತ್ಯ ಗೋಪಾಲ್ ದಾಸ್, ಮಹಂತ್ ಧರ್ಮ ದಾಸ್ ಹಾಗೂ ಬಿಎಲ್ ಶರ್ಮಾ ಅವರು ಇಂದು ಕೋರ್ಟ್ ಗೆ ಶರಣಾಗಿದ್ದಾರೆ.
ಮತ್ತೊಬ್ಬ ಆರೋಪಿ ಸತೀಶ್ ಪ್ರಧಾನ್ ಸೇರಿದಂತೆ ಆರು ಆರೋಪಿಗಳಿಗೆ ಮೇ 20ರಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ವಿಶೇಷ ಕೋರ್ಟ್ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಐವರು ಹಾಜರಾಗಿದ್ದಾರೆ. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರಧಾನ್ ಕೋರ್ಟ್ ಹಾಜರಾಗಿಲ್ಲ.
ವಿಚಾರಣೆ ಬಳಿಕ ಐವರು ಆರೋಪಿಗಳಿಗೆ ತಲಾ 20,000 ರುಪಾಯಿ ವೈಯಕ್ತಿಕ ಬಾಂಡ್ ಮೇಲೆ ಸಿಬಿಐ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CBI CourtBabri demolition caseಸಿಬಿಐ ಕೋರ್ಟ್Five accused surrenderಬಾಬ್ರಿ ಧ್ವಂಸ ಪ್ರಕರಣಐವರು ಆರೋಪಿಗಳು ಶರಣು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


