ಮಲತಂದೆಯಿಂದಲೇ ಅತ್ಯಾಚಾರಕ್ಕೊಳಗಾಗಿದ್ದ 10ರ ಬಾಲಕಿಗೆ ಗರ್ಭಪಾತ
ಮಲತಂದೆಯಿಂದಲೇ ಅತ್ಯಾಚಾರಕ್ಕೊಳಗಾಗಿ 5 ತಿಂಗಳ ಗರ್ಭಿಣಿಯಾಗಿದ್ದ 10 ವರ್ಷದ ಬಾಲಕಿಗೆ ಶುಕ್ರವಾರ ಗರ್ಭಪಾತ ಮಾಡಿಸಲಾಗಿದೆ...

Published On :
ರೊಹ್ಟಕ್; ಮಲತಂದೆಯಿಂದಲೇ ಅತ್ಯಾಚಾರಕ್ಕೊಳಗಾಗಿ 5 ತಿಂಗಳ ಗರ್ಭಿಣಿಯಾಗಿದ್ದ 10 ವರ್ಷದ ಬಾಲಕಿಗೆ ಶುಕ್ರವಾರ ಗರ್ಭಪಾತ ಮಾಡಿಸಲಾಗಿದೆ.
ವಿಷಯದ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲು ವೈದ್ಯಕೀಯ ಮಂಡಳಿಗೆ ಅನುಮತಿ ನೀಡಿದ್ದ ರೊಹ್ಟಕ್ ಜಿಲ್ಲಾ ನ್ಯಾಯಾಲಯ ತೀರ್ಪಿನ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಗರ್ಭಪಾತದ ಪ್ರಕ್ರಿಯೆ ಪೂರ್ಣಗೊಂಡಿದೆ. ಬಾಲಕಿ ಈಗ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಪದವಿ ಸಂಸ್ಥೆಯ ವೈದ್ಯರು ತಿಳಿಸಿದ್ದಾರೆ.
ಬಾಲಕಿಯ ಮಲತಂದೆಯೇ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಮಾಡುವ ಮೂಲಕ ಆಕೆ ಗರ್ಭ ಧರಿಸುವಂತೆ ಮಾಡಿದ್ದ, ಕೆಲ ದಿನಗಳ ಹಿಂದಷ್ಟೇ ಬಾಲಕಿ ತೀವ್ರವಾಗಿ ಅಸ್ವಸ್ಥಗೊಂಡಿದ್ದಳು. ಜ್ವರದಿಂದ ಬಳಲುತ್ತಿದ್ದ ಬಾಲಕಿಯನ್ನು ಆಕೆಯ ತಾಯಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾಗ ಬಾಲಕಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


