ವಂಚನೆ ಕೇಸು: ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ನಿರೀಕ್ಷಣಾ ಜಾಮೀನು
ಜವಳಿ ಸಂಸ್ಥೆಯ ಮಾಲೀಕ ದಾಖಲಿಸಿದ್ದ ವಂಚನೆ ಕೇಸಿಗೆ ಸಂಬಂಧಪಟ್ಟಂತೆ ಥಾಣೆಯ...

Published On :
ಥಾಣೆ: ಜವಳಿ ಸಂಸ್ಥೆಯ ಮಾಲೀಕ ದಾಖಲಿಸಿದ್ದ ವಂಚನೆ ಕೇಸಿಗೆ ಸಂಬಂಧಪಟ್ಟಂತೆ ಥಾಣೆಯ ಜಿಲ್ಲಾ ನ್ಯಾಯಾಲಯ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ಉದ್ಯಮಿ ರಾಜ್ ಕುಂದ್ರಾಗೆ ನಿರೀಕ್ಷಣಾ ಜಾಮೀನು ನೀಡಿದೆ.
ನ್ಯಾಯಾಲಯ ಈ ಹಿಂದೆ ಆರೋಪಿಗಳಿಗೆ ಬಂಧನವಾಗದಂತೆ ಮಧ್ಯಂತರ ರಕ್ಷಣೆ ನೀಡಿತ್ತು.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಂಗೀತ ಖಲಿಪೆ ಆದೇಶ ನೀಡಿ ಬಂಧನಕ್ಕೊಳಪಡಿಸಿದ್ದರೆ ಆರೋಪಿಗಳನ್ನು 1 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಮೇಲೆ ಬಿಡುಗಡೆ ಮಾಡಬಹುದಿತ್ತು ಎಂದು ಹೇಳಿದ್ದಾರೆ.
ಬಲೊಟಿಯಾ ಎಕ್ಸ್ಪೋರ್ಟ್ ನ ಮಾಲಿಕ ರವಿ ಭಲೊಟಿಯಾ, ಕಂಗೊನ್ ಪೊಲೀಸ್ ಠಾಣೆಯಲ್ಲಿ ಕಳೆದ ತಿಂಗಳು ದೂರು ದಾಖಲಿಸಿದ್ದರು. ರಾಜ್ ಕುಂದ್ರ ಮತ್ತು ಶಿಲ್ಪಾ ಶೆಟ್ಟಿ ನಿರ್ದೇಶಕರಾಗಿರುವ ಬೆಸ್ಟ್ ಡೀಲ್ ಟಿವಿಗೆ ಬೆಡ್ ಶೀಟ್ ಗಳನ್ನು ಪೂರೈಸಿದ್ದು, ಅವರು ಅದನ್ನು ಮಾರಾಟ ಮಾಡಿದ್ದಾರೆ. ಆದರೆ ತಮಗೆ ಬರಬೇಕಾದ 24 ಲಕ್ಷ ರೂಪಾಯಿ ನೀಡಲಿಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


