ಜಮ್ಮು ಮತ್ತು ಕಾಶ್ಮೀರ: ಗುಂಡಿನ ಚಕಮಕಿ, 4 ಯೋಧರು ಹುತಾತ್ಮ, 4 ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ಒಸಿ)ಯ ನೌಗಾಮ್ ಸೆಕ್ಟರ್ ನಲ್ಲಿ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ಒಸಿ)ಯ ನೌಗಾಮ್ ಸೆಕ್ಟರ್ ನಲ್ಲಿ ಉಗ್ರರ ನುಸುಳುವಿಕೆ ಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಇನ್ನು ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಉಗ್ರರನ್ನೂ ಸೇನಾಪಡೆ ಹೊಡೆದುರುಳಿಸಿದೆ.
ಎಲ್ ಒಸಿಯ ನೌಗಾಮ್ ಸೆಕ್ಟರ್ ನಲ್ಲಿ ನಿಯೋಜನೆಗೊಂಡಿದ್ದ ಸೈನಿಕರು ಒಳನುಸುಳಲು ಯತ್ನಿಸಿದ್ದ ಉಗ್ರರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರು ಸಹ ಪ್ರತಿ ದಾಳಿ ನಡೆಸಿದ್ದು, ಗುಂಡಿನ ಕಾಳಗದಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಮತ್ತು ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ಜಮ್ಮು ಮತ್ತು ಕಾಶ್ಮೀರದ ಪೂಂಛ ಜಿಲ್ಲೆಯ ಎಲ್‌ಒಸಿ ಸಮೀಪ ನೆಲಬಾಂಬ್‌ವೊಂದು ಸ್ಫೋಟಗೊಂಡ ಪರಿಣಾಮ, ಯೋಧರೊಬ್ಬರು ಗಾಯಗೊಂಡಿದ್ದಾರೆ. ಮೆಂಧಾರ್ ವಲಯದಲ್ಲಿ ಅಕಸ್ಮಾತಾಗಿ ಯೋಧ ನೆಲಬಾಂಬ್ ಮೇಲೆಯೇ ಕಾಲಿಟ್ಟ ಪರಿಣಾಮ ಸ್ಫೋಟ ಸಂಭವಿಸಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ ಎಂದು ಸೇನೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Two militantsಇಬ್ಬರು ಉಗ್ರರುNowgam sectorInfiltration bid foiledtwo soldiers killedನೌಗಾಮ್ ಸೆಕ್ಟರ್ಒಳನುಸುಳುವಿಕೆ ಯತ್ನ ವಿಫಲಇಬ್ಬರು ಯೋಧರು ಸಾವು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


