ಆಶುತೋಷ್, ಸಂಜಯ್ ಸಿಂಗ್ ರಷ್ಯಾ ಪ್ರವಾಸಕ್ಕೆ ಕಳಂಕಿತ ಶೀತಲ್ ಪ್ರಸಾದ್ ಫಂಡಿಂಗ್: ಮಿಶ್ರಾ ಹೊಸ ಬಾಂಬ್
ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ದೆಹಲಿ ಮಾಜಿ ಸಚಿವ ಕಪಿಲ್ ಮಿಶ್ರಾ ಅವರು....

Published On :
ನವದೆಹಲಿ: ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ದೆಹಲಿ ಮಾಜಿ ಸಚಿವ ಕಪಿಲ್ ಮಿಶ್ರಾ ಅವರು ಭಾನುವಾರ ಹೊಸ ಬಾಂಬ್ ಸಿಡಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಪಿಲ್ ಮಿಶ್ರಾ, ಹಲವು ಕಂಪನಿಗಳ ಹಗರಣದ ಆರೋಪಿ ಶೀತಲ್ ಪ್ರಸಾದ್ ಸಿಂಗ್ ಅವರು ಆಮ್ ಆದ್ಮಿ ಪಕ್ಷದ ನಾಯಕರಾದ ಆಶುತೋಷ್ ಹಾಗೂ ಸಂಜಯ್ ಸಿಂಗ್ ಅವರ ರಷ್ಯಾ ಪ್ರವಾಸಕ್ಕೆ ಹಣಕಾಸಿನ ನೆರವು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಆಮ್ ಆದ್ಮಿ ಪಕ್ಷದ 4ರಿಂದ 5ಮಂದಿ ಭ್ರಷ್ಟರಿದ್ದು, ಅವರನ್ನು ಪಕ್ಷದಿಂದ ಹೊರ ಹಾಕುವ ಅಗತ್ಯವಿದೆ ಎಂದು ಮಾಜಿ ಸಚಿವ ಹೇಳಿದ್ದಾರೆ. ಅಲ್ಲದೆ ಆಶುತೋಷ್ ಮತ್ತು ಸಂಜಯ್ ಸಿಂಗ್ ಎಎಪಿಯನ್ನು ಹೈಜಾಕ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಇದೇ ವೇಳೆ ಭ್ರಷ್ಟಾಚಾರ ಮುಕ್ತ ದೆಹಲಿಗಾಗಿ 'ಕ್ಲೀನ್ ಎಎಪಿ' ಆಂದೋಲನಕ್ಕೆ ಕೈ ಜೋಡಿಸುವಂತೆ ಕಪಿಲ್ ಮಿಶ್ರಾ ಕರೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸಂಜಯ್ ಸಿಂಗ್Sanjay SinghKapil MishraAshutoshಕಪಿಲ್ ಮಿಶ್ರಾಆಶುತೋಷ್\'Scam accused Sheetal Prasad SinghRussia tripಕಳಂಕಿತ ಶೀತಲ್ ಪ್ರದಾಸ್ ಸಿಂಗ್ರಷ್ಯಾ ಪ್ರವಾಸ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


