ದೇಶ

ಕಾಶ್ಮೀರದ ಪರಿಸ್ಥಿತಿ ಕೈ ಮೀರಿ ಹೋಗಿದೆ: ಶರದ್ ಯಾದವ್

ಕಾಶ್ಮೀರದ ಕಣಿವೆಯ ಸ್ಥಿತಿ ಕೈಮೀರಿ ಹೋಗಿದ್ದು ಸರ್ಕಾರ ಅದನ್ನು ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ಜೆಡಿಯು ನಾಯಕ ಶರದ್ ಯಾದವ್ ಹೇಳಿದ್ದಾರೆ.

ಕಾಶ್ಮೀರದ ಪರಿಸ್ಥಿತಿ ಕೈ ಮೀರಿ ಹೋಗಿದೆ: ಶರದ್ ಯಾದವ್
ಶರದ್ ಯಾದವ್
Published On :
ನವದೆಹಲಿ: ಕಾಶ್ಮೀರದ ಕಣಿವೆಯ ಸ್ಥಿತಿ ಕೈಮೀರಿ ಹೋಗಿದ್ದು ಸರ್ಕಾರ ಅದನ್ನು ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ಜೆಡಿಯು ನಾಯಕ ಶರದ್ ಯಾದವ್ ಹೇಳಿದ್ದಾರೆ.
ಕಾಶ್ಮೀರ ಕಣಿವೆಯ ಬಗ್ಗೆ ರಾಷ್ಟ್ರ ಮಟ್ಟದ ಸಮ್ಮೇಳನ ನಡೆಸಲು ಯತ್ನಿಸುತ್ತಿರುವ ನಡೆಸಿರುವ ಜೆಡಿಯು ನಾಯಕ ಶರದ್ ಯಾದವ್ ಕಾಂಗ್ರೆಸ್, ಸಿಪಿಐ(ಎಂ) ಪಕ್ಷ ಹಾಗೂ ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸರ್ಕಾರೇತರ ನಿಯೋಗದ ಸದಸ್ಯರಾಗಿದ್ದ ಬಿಜೆಪಿ ಸದಸ್ಯ ಯಶ್ವಂತ್ ಸಿನ್ಹಾ ಅವರನ್ನು ಭೇಟಿ ಮಾಡಿದ್ದಾರೆ. 
ಕಳೆದ ಮೂರು ವರ್ಷಗಳಲ್ಲಿ ಜಮ್ಮು-ಕಾಶ್ಮೀರದ ಪರಿಸ್ಥಿತಿ ಹದಗೆಟ್ಟು, ಕೈ ಮೀರಿ ಹೋಗಿದೆ. ಕಾಶ್ಮೀರ ಕಣಿವೆಯಲ್ಲಿ ಶಾಂತಿಯನ್ನು ಮರುಸ್ಥಾಪನೆ ಮಾಡುವುದು ಸವಾಲಿನ ವಿಷಯವಾಗಿದ್ದು ಕಣಿವೆ ಭಯೋತ್ಪಾದಕರ ಕೈಗೆ ಸಿಲುಕಿದೆ. ಸರ್ಕಾರಕ್ಕೆ ಪರಿಸ್ಥಿತಿಯನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ ಎಂದು ಶರದ್ ಯಾದವ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.