10 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ರದ್ದು
10 ರಾಜ್ಯಸಭಾ ಸ್ಥಾನಗಳಿಗೆ ಜೂನ್ 8ರಂದು ನಿಗದಿಯಾಗಿದ್ದ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ...

Published On :
ನವದೆಹಲಿ: 10 ರಾಜ್ಯಸಭಾ ಸ್ಥಾನಗಳಿಗೆ ಜೂನ್ 8ರಂದು ನಿಗದಿಯಾಗಿದ್ದ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಸೋಮವಾರ ರದ್ದುಗೊಳಿಸಿದೆ. ಆದರೆ ಹೊಸ ದಿನಾಂಕವನ್ನು ಪ್ರಕಟಿಸಿಲ್ಲ.
ಜುಲೈನಲ್ಲಿ ರಾಷ್ಟ್ರಪತಿ ಚುನಾವಣೆ ಹಾಗೂ ಜೂನ್ 3ರಿಂದ ಇವಿಎಂ ತಿರುಚುವ ಚಾಲೆಂಜ್ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಗೋವಾ, ಗುಜರಾತ್ ಹಾಗೂ ಪಶ್ಚಿಮ ಬಂಗಾಳದ 10 ರಾಜ್ಯಸಭೆ ಸ್ಥಾನಗಳಿಗೆ ನಿಗದಿಯಾಗಿದ್ದ ಚುನಾವಣೆಯನ್ನು ಹಿಂಪಡೆಯಲಾಗಿದೆ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೆ ಶೀಘ್ರದಲ್ಲೇ ಹೊಸ ದಿನಾಂಕವನ್ನು ಪ್ರಕಟಿಸುವುದಾಗಿ ತಿಳಿಸಿದೆ.
ಜುಲೈ ಮತ್ತು ಆಗಸ್ಟ್ ನಲ್ಲಿ ಕೇಂದ್ರ ಸಚಿವ ಸ್ಮೃತಿ ಇರಾನಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಸೇರಿದಂತೆ ಕಾಂಗ್ರೆಸ್ ಮೂವರು, ಬಿಜೆಪಿ ಇಬ್ಬರು, ಟಿಎಂಸಿಯ ನಾಲ್ವರು ಹಾಗೂ ಸಿಪಿಎಂ ಓರ್ವ ಸದಸ್ಯರು ನಿವೃತ್ತಿಯಾಗುತ್ತಿದ್ದು, ಆ ಸ್ಥಾನಗಳಿಗೆ ಇಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಬೇಕಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


