ಮೇ.24 ರಂದು ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಅಯೋಧ್ಯೆ ಪ್ರಕರಣ ವಿಚಾರಣೆ
1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯನ್ನು ಸಿಬಿಐ ವಿಶೇಷ ನ್ಯಾಯಾಲಯ ಮೇ.24 ಕ್ಕೆ ನಿಗದಿಪಡಿಸಿದೆ.

Published On :
ಲಖನೌ: 1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯನ್ನು ಸಿಬಿಐ ವಿಶೇಷ ನ್ಯಾಯಾಲಯ ಮೇ.24 ಕ್ಕೆ ನಿಗದಿಪಡಿಸಿದೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಮೇ.22 ಕ್ಕೆ ನಿಗದಿಯಾಗಿತ್ತು. ಆದರೆ ಪ್ರಕರಣದ ಓರ್ವ ಆರೋಪಿ ಸತೀಶ್ ಪ್ರಧಾನ್ ಕೋರ್ಟ್ ಗೆ ಹಾಜರಾಗದೇ ಇದ್ದ ಕಾರಣ ಕೋರ್ಟ್ ಮುಂದಿನ ವಿಚಾರಣೆಯನ್ನು ಮೇ.24 ಕ್ಕೆ ನಿಗದಿಪಡಿಸಿದೆ.
ಮೇ.20 ರಂದು ವಿಚಾರಣೆಯನ್ನು ಪ್ರಾರಂಭಿಸಿದ ವಿಶೇಷ ನ್ಯಾಯಾಲಯ ಪ್ರಕರಣದಲ್ಲಿ ಆರೋಪಿಗಳಾಗಿರುವ 5 ವಿಹೆಚ್ ಪಿ ನಾಯಕರಿಗೆ ಜಾಮೀನು ಮಂಜೂರು ಮಾಡಿತ್ತು. ಬಾಬ್ರಿ ಮಸೀದಿ ಪ್ರಕರಣದ ಸಂಬಂಧ ವಿಚಾರಣೆಯನ್ನು ಪ್ರಾರಂಭಿಸಿ ಎರಡು ವರ್ಷಗಳಲ್ಲಿ ತೀರ್ಪು ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ವಿಶೇಷ ನ್ಯಾಯಾಲಯಕ್ಕೆ ಏ.19 ರಂದು ಆದೇಶ ಹೊರಡಿಸಿತ್ತು. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ವಿಶೇಷ ನ್ಯಾಯಲಯ ಪ್ರಕರಣದ ವಿಚಾರಣೆ ನಡೆಸಲು ಪ್ರಾರಂಭಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


