ಉತ್ತರ ಪ್ರದೇಶದ ಮೂವರು ಐಎಎಸ್ ಅಧಿಕಾರಿಗಳ ಮನೆ ಮೇಲೆ ಐಟಿ ದಾಳಿ
ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಐದು ನಗರಗಳಲ್ಲಿರುವ ಮೂವರು ಐಎಎಸ್ ಅಧಿಕಾರಿಗಳ...

Published On :
ಲಖನೌ: ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಐದು ನಗರಗಳಲ್ಲಿರುವ ಮೂವರು ಐಎಎಸ್ ಅಧಿಕಾರಿಗಳ ಮನೆ ಮೇಲೆ ಬುಧವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಂಧಿಖಾನೆ ವಿಶೇಷ ಕಾರ್ಯದರ್ಶಿ ಸತ್ಯೇಂದ್ರ ಕುಮಾರ್ ಸಿಂಗ್, ಈ ಹಿಂದೆ ಫಿರೋಜಾಬಾದ್ ಜಿಲ್ಲಾಧಿಕಾರಿಯಾಗಿದ್ದ ವಿಮಲ್ ಕುಮಾರ್ ಶರ್ಮಾ ಹಾಗೂ ಆರೋಗ್ಯ ಇಲಾಖೆ ನಿರ್ದೇಶಕ ಹೃದಯ್ ಶಂಕರ್ ತಿವಾರಿ ಅವರ ಮನೆ ಮೇಲೆ ಮತ್ತು ವಿಮಲ್ ಕುಮಾರ್ ಶರ್ಮಾ ಅವರ ಪತ್ನಿ, ಮೀರತ್ ಆರ್ ಟಿಒ ಮಮತಾ ಶರ್ಮಾ ಅವರ ನಿವಾಸದ ಮೇಲೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಲಖನೌ ಹಾಗೂ ದೆಹಲಿ ತನಿಖಾ ತಂಡ ಜಂಟಿಯಾಗಿ ಇಂದು ಸತ್ಯೇಂದ್ರ ಕುಮಾರ್ ಸಿಂಗ್ ಸೇರಿದ ಲಖನೌ ಮತ್ತು ನೊಯ್ಡಾದ ಆರು ಮನೆಗಳ ಮೇಲೆ ದಾಳಿ ನಡೆಸಿದೆ. ಸಿಂಗ್ ಅವರು ಈ ಹಿಂದೆ ಸಮಾಜವಾದಿ ಪಕ್ಷದ ಸರ್ಕಾರದ ವೇಳೆ ವಿವಾದಾತ್ಮಕ ಲಖನೌ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು.
ಮೀರತ್, ಭಾಗಪೇಟ್, ಗ್ರೇಟರ್ ನೊಯ್ಡಾ, ಲಖನೌ ಹಾಗೂ ದೆಹಲಿ ಸೇರಿದಂತೆ ಐದು ನಗರಗಳಲ್ಲಿರುವ ಹೃದಯ್ ಶಂಕರ್ ತಿವಾರಿ ಅವರ ಮನೆ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿಗೆ ಸಂಬಂಧಿಸಿದಂತೆ ಇಂದು ಸಂಜೆ ಮಾಹಿತಿ ನೀಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Uttar pradeshಉತ್ತರ ಪ್ರದೇಶದಾಳಿIncome tax departmentಆದಾಯ ತೆರಿಗೆ ಇಲಾಖೆIAS officersಐಎಎಸ್ ಅಧಿಕಾರಿಗಳುsearches on premises
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


