ದೇಶ

ಲಾಲು ಪುತ್ರಿ ಮಿಸಾ ಭಾರ್ತಿ ಹಾಗೂ ಪತಿಗೆ ಐಟಿ ಸಮನ್ಸ್

ಅಕ್ರಮ ಹಣ ವಹಿವಾಟು ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ,....

ಲಾಲು ಪುತ್ರಿ ಮಿಸಾ ಭಾರ್ತಿ ಹಾಗೂ ಪತಿಗೆ ಐಟಿ ಸಮನ್ಸ್
ಮಿಸಾ ಭಾರ್ತಿ
Published On :
ನವದೆಹಲಿ: ಅಕ್ರಮ ಹಣ ವಹಿವಾಟು ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ, ರಾಜ್ಯಸಭಾ ಸದಸ್ಯೆ ಮಿಸಾ ಭಾರ್ತಿ ಹಾಗೂ ಅವರ ಪತಿಗೆ ಆದಾಯ ತೆರಿಗೆ ಇಲಾಖೆ ಬುಧವಾರ ಸಮನ್ಸ್ ಜಾರಿ ಮಾಡಿದೆ.
ನಿನ್ನೆಯಷ್ಟೇ ಜಾರಿ ನಿರ್ದೇಶನಾಲಯ(ಇಡಿ) ಲಾಲು ಪ್ರಸಾದ್ ಯಾದವ್ ಅವರ ಪುತ್ರಿಯೊಂದಿಗೆ ಸಂಪರ್ಕ ಹೊಂದಿದ್ದ ಸಿಎ(ಲೆಕ್ಕ ಪರಿಶೋಧಕ) ರಾಜೇಶ್ ಅಗರ್ವಾಲ್ ಅವರನ್ನು ಬಂಧಿಸಿದ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆ ಮಿಸಾ ಭಾರ್ತಿ ಹಾಗೂ ಅವರ ಪತಿಗೆ ಸಮನ್ಸ್ ಜಾರಿ ಮಾಡಿ ಶಾಕ್ ನೀಡಿದೆ.
ರಾಜೇಶ್ ಅಗರ್ವಾಲ್ ಅವರು ಸುಮಾರು 8 ಸಾವಿರ ಕೋಟಿ ರುಪಾಯಿ ಅಕ್ರಮ ಹಣ ವಹಿವಾಟು ನಡೆಸಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಲಾಲು ಪ್ರಸಾದ್ ಯಾದವ್ ಬೇನಾಮೆ ಆಸ್ತಿಗೆ ಸಂಬಂಧಿಸಿದಂತೆ ಮೇ.16 ರಂದು ಐಟಿ ನವದೆಹಲಿಯ 22 ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಈ ಪ್ರಕರಣದ ಭಾಗವಾಗಿಯೇ ಈಗ ಮಿಸಾ ಭಾರ್ತಿಸಿಎಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.