ದೇಶ

ಭಟ್ಕಳದಲ್ಲಿ ಭೀಕರ ರಸ್ತೆ ಅಪಘಾತ: ಮದುಮಗಳು ಸೇರಿ 6 ಸಾವು, ಹಲವರಿಗೆ ಗಾಯ

ಮದುವೆ ದಿಬ್ಬಣದ ಟೆಂಪೋವೊಂದಕ್ಕೆ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಮದುಮಗಳು ಸೇರಿದಂತೆ ಒಟ್ಟು 6 ಮಂದಿ ದುರ್ಮರಣವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಅನಂತವಾಡಿ ಎಂಬಲ್ಲಿ ಗುರುವಾರ ನಸುಕಿನ...

ಭಟ್ಕಳದಲ್ಲಿ ಭೀಕರ ರಸ್ತೆ ಅಪಘಾತ: ಮದುಮಗಳು ಸೇರಿ 6 ಸಾವು, ಹಲವರಿಗೆ ಗಾಯ
ಸಂಗ್ರಹ ಚಿತ್ರ
Published On :

ಭಟ್ಕಳ: ಮದುವೆ ದಿಬ್ಬಣದ ಟೆಂಪೋವೊಂದಕ್ಕೆ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಮದುಮಗಳು ಸೇರಿದಂತೆ ಒಟ್ಟು 6 ಮಂದಿ ದುರ್ಮರಣವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಅನಂತವಾಡಿ ಎಂಬಲ್ಲಿ ಗುರುವಾರ ನಸುಕಿನ ವೇಳೆ ನಡೆದಿದೆ. 

ಬೆಳಗಿನ ಜಾವ 1.30ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಮದುವೆ ದಿಬ್ಬಣದ ಟೆಂಪೋ ಶಿರಸಿ ತಾಲ್ಲೂಕಿನ ದಾಸನಕೊಪ್ಪದಿಂದ ಧರ್ಮಸ್ಥಳಕ್ಕೆ ಹೊರಟಿತ್ತು. ಖಾಸಗಿ ಬಸ್ ವೊಂದು ಮಂಗಳೂರಿನಿಂದ ಹೊನ್ನಾವರದ ಕಡೆಗೆ ತೆರಳುತ್ತಿತ್ತು. ಅನಂತವಾಡಿ ಸಮೀಪದ ಹೆದ್ದಾರಿ 66ರಲ್ಲಿ ಬಸ್ ಮತ್ತು ಟೆಂಪೋ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. 

ಪರಿಣಾಮ ಮದುಮಗಳು ದಿವ್ಯಾ ಕರ್ಡೇಕರ್ (23), ಬಸ್ ಚಾಲಕ ಉಮೇಶ್ ವಾಲ್ಮೀಕಿ (35), ಪಾಲಾಕ್ಷಿ (42), ಬೇಬಿ (35), ಸುಬ್ರಹ್ಮಣ್ಯ (14), ನಾಗಪ್ಪ ಗಣಿಗಾರ್ (45) ಸಾವನ್ನಪ್ಪಿದ್ದಾರೆ. 

ಅಪಘಾತದಲ್ಲಿ 26ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳೀಯರು ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಿದರು. ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.