ದೇಶ

3 ವರ್ಷಗಳ ಮೋದಿ ಆಡಳಿತ, ಬ್ರೈನ್ ಡ್ರೈನ್ ನಿಂದ ಬ್ರೈನ್ ಗೇನ್ ನತ್ತ ಭಾರತ!

ಇತರ ಕ್ಷೇತ್ರಗಳಲ್ಲಿ ನಿರೀಕ್ಷೆಗೂ ಮೀರಿದ ಸಾಧನೆ ಮಾಡಿರುವ ಕೇಂದ್ರ ಸರ್ಕಾರ ಬ್ರೈನ್ ಡ್ರೈನ್ ತಡೆಗಟ್ಟುವುದರಲ್ಲಿಯೂ ಗಣನೀಯ ಸಾಧನೆ ಮಾಡಿರುವುದಾಗಿ ಹೇಳಿದೆ.

3 ವರ್ಷಗಳ ಮೋದಿ ಆಡಳಿತ, ಬ್ರೈನ್ ಡ್ರೈನ್ ನಿಂದ ಬ್ರೈನ್ ಗೇನ್ ನತ್ತ ಭಾರತ!
Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೀಗ ಮೂರು ವರ್ಷ. ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡಾಗ ಬಗೆಹರಿಸಲು ಅವರ ಮುಂದಿದ್ದ ಸವಾಲುಗಳ ಪೈಕಿ  ಬ್ರೈನ್ ಡ್ರೈನ್ ಸಹ ಒಂದು. ಇತರ ಕ್ಷೇತ್ರಗಳಲ್ಲಿ ನಿರೀಕ್ಷೆಗೂ ಮೀರಿದ ಸಾಧನೆ ಮಾಡಿರುವ ಕೇಂದ್ರ ಸರ್ಕಾರ ಬ್ರೈನ್ ಡ್ರೈನ್ ತಡೆಗಟ್ಟುವುದರಲ್ಲಿಯೂ ಗಣನೀಯ ಸಾಧನೆ ಮಾಡಿರುವುದಾಗಿ ಹೇಳಿದೆ. 
ಕಳೆದ ಮೂರು ವರ್ಷಗಳಲ್ಲಿ 1000 ವಿಜ್ಞಾನಿಗಳು ವಿದೇಶದಿಂದ ಸ್ವದೇಶಕ್ಕೆ ವಾಪಸ್ ಆಗಿದ್ದು, ಭಾರತದಲ್ಲೇ ಸಂಶೋಧನೆ ನಡೆಸಲು ಪ್ರಾರಂಭಿಸಿದ್ದಾರೆ. ಈ ಬಗ್ಗೆ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಹರ್ಷವರ್ಧನ್ ಮಾಹಿತಿ ನೀಡಿದ್ದು, ಮೋದಿ ನೇತೃತ್ವದ ಆಡಳಿತದಲ್ಲಿ ಭಾರತ ಬ್ರೈನ್ ಡ್ರೈನ್ ನಿಂದ ಬ್ರೈನ್ ಗೇನ್ ನತ್ತ ಸಾಗಿದೆ ಎಂದು ಹೇಳಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ವಿಜ್ಞಾನ ಸಂಶೋಧನೆಗೆ ಅತಿ ಹೆಚ್ಚು ಒತ್ತು ಕೊಡುವುದಕ್ಕೆ ಕೈಗೊಂಡಿರುವ ಕ್ರಮಗಳಿಂದ ವಿದೇಶಗಳಲ್ಲಿ ಕೆಲಸ ಮಾಡುತ್ತಿದ್ದ ವಿಜ್ಞಾನಿಗಳು ಭಾರತಕ್ಕೆ ವಾಪಸ್ ಬರಲು ಪ್ರಾರಂಭಿಸಿದ್ದು ಭಾರತದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಂಶೋಧನೆ ಮಾಡಲು ಪ್ರಾರಂಭಿಸಿದ್ದಾರೆ ಎಂದು ಡಾ.ಹರ್ಷವರ್ಧನ್ ಹೇಳಿದ್ದಾರೆ. 
ಕಳೆದ ಮೂರು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿಜ್ಞಾನ ಸಂಶೋಧನೆಗೆ ಅತಿ ಹೆಚ್ಚು ಆದ್ಯತೆ ನೀಡಿದ್ದು, ವಿಜ್ಞಾನ ಸಂಶೋಧನೆಯ ಗುಣಮಟ್ಟವನ್ನು ಹೆಚ್ಚಿಸಲು ಕ್ರಮ ಕೈಗೊಂಡಿದೆ. ಮುಂದಿನ ಎರಡು ವರ್ಷಗಳಲ್ಲಿ ಹೊಸ ಯೋಜನೆಗಳು ಜಾರಿಯಾಗುತ್ತಿದ್ದು ನ್ಯೂ ಇಂಡಿಯಾ ವಿಷನ್ ಗಾಗಿ ಸರ್ಕಾರದಿಂದಲೇ 1 ಲಕ್ಷ ವಿಜ್ಞಾನಿಗಳನ್ನು ತಯಾರು ಮಾಡಲಾಗುತ್ತದೆ ಎಂದು ಡಾ.ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.