ಭಾಷಣ, ಆಶ್ವಾಸನೆಗಳಲ್ಲಿಯೇ 3 ವರ್ಷ ಕಳೆದ ಮೋದಿ ಸರ್ಕಾರ: ಕಾಂಗ್ರೆಸ್ ಟೀಕೆ
ಕೇಂದ್ರದಲ್ಲಿ ಮೂರು ವರ್ಷಗಳ ಆಡಳಿತಾವಧಿಯನ್ನು ಇಂದಿಗೆ ಪೂರೈಸಿದ ಸಂದರ್ಭದಲ್ಲಿ ಬಿಜೆಪಿ ತನ್ನ ಉತ್ತಮ...

Published On :
ನವದೆಹಲಿ: ಕೇಂದ್ರದಲ್ಲಿ ಮೂರು ವರ್ಷಗಳ ಆಡಳಿತಾವಧಿಯನ್ನು ಇಂದಿಗೆ ಪೂರೈಸಿದ ಸಂದರ್ಭದಲ್ಲಿ ಬಿಜೆಪಿ ತನ್ನ ಉತ್ತಮ ಕೆಲಸಗಳನ್ನು ಮತ್ತು ಅಂಶಗಳನ್ನು ಜನರ ಮುಂದಿಡಲು ಪ್ರಯತ್ನಿಸುತ್ತಿದ್ದರೆ, ಕೇಸರಿ ಪಕ್ಷವನ್ನು ಟೀಕಿಸಿ ಮೂಲೆಗುಂಪು ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.
ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್, ಬಿಜೆಪಿ 2,000 ಕೋಟಿ ರೂಪಾಯಿಗಳನ್ನು ಕಾರ್ಯಕ್ರಮ, ಉತ್ಸವಗಳಿಗೆಂದು ಖರ್ಚು ಮಾಡಿದೆ. ಮೋದಿ ನೇತೃತ್ವದ ಸರ್ಕಾರದ ಈ ಮೂರು ವರ್ಷಗಳ ಆಡಳಿತಾವಧಿ ಭಾಷಣ ಮತ್ತು ಆಶ್ವಾಸನೆಗಳಲ್ಲಿಯೇ ಕಳೆದು ಹೋದವು ಎಂದು ಹೇಳಬಹುದು ಎಂದರು.
ಮೋದಿ ಸರ್ಕಾರದ ಸಂಪೂರ್ಣ ಗಮನ ಪ್ರಚಾರದ ಮೇಲಿತ್ತು. ದೇಶಕ್ಕಾಗಿ ಯಾವುದೇ ವಾಸ್ತವ ನೀತಿಯನ್ನು ಹೊಂದಿಲ್ಲ. ಕಳೆದ ಮೂರು ವರ್ಷಗಳಲ್ಲಿ ಮೋದಿ ಸರ್ಕಾರವೇನೂ ಮಾಡಿಲ್ಲ. ಮೇಕ್ ಇನ್ ಇಂಡಿಯಾ, ಜನಧನ್, ಸ್ವಚ್ಥ ಭಾರತ್ ಅಭಿಯಾನದಂತಹ ಯೋಜನೆಗಳ ಅಭಿವೃದ್ಧಿಗೆ ಸರ್ಕಾರ ಗಮನ ಹರಿಸಿದೆ ಎಂದು ಕಾಂಗ್ರೆಸ್ ನಾಯಕ ಕಮಲ್ ನಾಥ್ ಆರೋಪಿಸಿದರು.
ಕೇಂದ್ರ ಸರ್ಕಾರದ ಅಭಿಯಾನಗಳನ್ನು ಪ್ರಚಾರ ಮಾಡಲು ಲಕ್ಷಾಂತರ ಕೋಟಿ ರೂಪಾಯಿಗಳನ್ನು ವ್ಯಯಿಸಲಾಗಿದೆ. ಎಷ್ಟು ಕಪ್ಪು ಹಣ ಹಿಂಪಡೆಯಲಾಗಿದೆ ಎಂದು ಸರ್ಕಾರ ತಿಳಿಸಬೇಕು ಎಂದರು.
ಹಳೆಯ ಅಧಿಕ ಮೌಲ್ಯದ ನೋಟುಗಳ ಅಮಾನ್ಯತೆಯಿಂದ ದೇಶಕ್ಕೆ ಏನು ಪ್ರಯೋಜನವಾಗಿದೆ ಎಂದು ಸರ್ಕಾರ ಹೇಳಬೇಕು. ಈ ಮೂರು ವರ್ಷಗಳಲ್ಲಿ ದೇಶದ ರೈತರ ಸ್ಥಿತಿ ಹದಗೆಟ್ಟಿದೆ. ಮೋದಿ ಸರ್ಕಾರದ ಅವಧಿಯಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳೆ ಸಾಲ ವಿಮೆಯಿಂದಲೂ ಯಾವುದೇ ಉಪಯೋಗವಾಗಿಲ್ಲ ಎಂದರು.
ದೇಶದ ಜನರ ಮನಸ್ಸನ್ನು ಬೇರೆಡೆಗೆ ಹರಿಸಲು ಬಿಜೆಪಿ ಹಲವು ಉಪಾಯಗಳನ್ನ ಮಾಡುತ್ತಿದ್ದು ಅದು ಕಲಾಕಾರನ ರಾಜನೀತಿಯಾಗಿದೆ ಎಂದು ಟೀಕಿಸಿದರು.
ಪ್ರಧಾನಿ ಮೋದಿಯವರು ಚುನಾವಣಾ ಪ್ರಚಾರದ ವೇಳೆ ಯುವಕರಿಗೆ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದರು. ಆದರೆ ಅದರ ಫಲಿತಾಂಶ ಮಾತ್ರ ಶೂನ್ಯ. 2015ರಲ್ಲಿ ಕೇವಲ 1.35 ಲಕ್ಷ ಉದ್ಯೋಗವನ್ನು ಸೃಷ್ಟಿ ಮಾಡಲಾಗಿತ್ತು. 2028ರ ವೇಳೆಗೆ ಭಾರತ 34.3 ಕೋಟಿ ಉದ್ಯೋಗವನ್ನು ಸೃಷ್ಟಿ ಮಾಡಬೇಕಾಗಿದೆ ಎಂದು ಕಮಲ್ ನಾಥ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


