ಸಹರನಾಪುರ ಹಿಂಸಾಚಾರ 'ಪೂರ್ವ ನಿಯೋಜಿತ ಪಿತೂರಿ': ಸಿಎಂ ಯೋಗಿ ಆದಿತ್ಯನಾಥ್
ಸಹರಾನಪುರ ಹಿಂಸಾಚಾರ ಪ್ರಕರಣವೊಂದು ಪೂರ್ವ ನಿಯೋಜಿತ ಪಿತೂರಿಯಾಗಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ಹೇಳಿದ್ದಾರೆ...

Published On :
ಲಖನೌ: ಸಹರನಾಪುರ ಹಿಂಸಾಚಾರ ಪ್ರಕರಣವೊಂದು ಪೂರ್ವ ನಿಯೋಜಿತ ಪಿತೂರಿಯಾಗಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ಹೇಳಿದ್ದಾರೆ.
ಉತ್ತರಪ್ರದೇಶದ ಸಹರನಾಪುರದಲ್ಲಿ ದಲಿತ ಮತ್ತು ರಜಪೂತ ಸಮುದಾಯಗಳ ನಡುವೆ ಕೆಲ ದಿನಗಳ ಹಿಂದಷ್ಟೇ ಘರ್ಷಣೆ ನಡೆದಿತ್ತು. ಘರ್ಷಣೆಯಲ್ಲಿ ವ್ಯಕ್ತಿಯೋರ್ವ ಸಾವನ್ನಪ್ಪಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿತ್ತು.
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಯೋಗಿ ಆದಿತ್ಯನಾಥ್ ಅವರು, ಹಿಂಸಾಚಾರವೊಂದು ಪೂರ್ವ ನಿಯೋಜಿತ ಪಿತೂರಿಯಾಗಿದೆ. ಪ್ರಸ್ತುತ ಸಹರನಾಪುರದಲ್ಲಿ ಪರಿಸ್ಥಿತಿ ಸುಧಾರಿಸಿದ್ದು, ಜನಜೀವನ ಸಾಮಾನ್ಯವಾಗಿದೆ. ಶೀಘ್ರದಲ್ಲಿ ಜಿಲ್ಲಾಧಿಕಾರಿಗಳ ನೂತನ ತಂಡವನ್ನು ನೇಮಕ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಕಳೆದೆರಡು ದಿನಗಳಿಂದ ಸಹರನಾಪುರದಲ್ಲಿ ಹಿಂಸಾಚಾರ ನಡೆದಿತ್ತು. ಹಿಂಸಾಚಾರ ಹತ್ತಿಕ್ಕುವ ಸಲುವಾಗಿ ಕೇಂದ್ರ ಗೃಹ ಸಚಿವಾಲಯ 400ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿತ್ತು. ಇಲ್ಲದೆ, ಹಿಂಸಾಚಾರ ಕುರಿತಂತೆ ವರದಿ ಸಲ್ಲಿಸುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ಸೂಚನೆ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Uttar pradeshಉತ್ತರಪ್ರದೇಶYogi Adityanathಯೋಗಿ ಆದಿತ್ಯನಾಥ್Saharanpur violationWell-planned conspiracyಸಹರನಾಪುರ ಹಿಂಸಾಚಾರಪೂರ್ವ ನಿಯೋಜಿತ ಪಿತೂರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


