ದೇಶ

'ಪಂಜಾಬ್ ಸಿಂಹ' ಕೆಪಿಎಸ್ ಗಿಲ್ ನಿಧನ

ಪಂಜಾಬ್ ಸಿಂಹ ಎಂದೇ ಖ್ಯಾತರಾಗಿದ್ದ ಪಂಜಾಬ್ ಮಾಜಿ ಪೊಲೀಸ್ ಮಹಾ ನಿರ್ದೇಶಕ ಕೆಪಿಎಸ್ ಗಿಲ್ ಅವರು ಶುಕ್ರವಾರ ಹೃದಯಾಘಾತದಿಂದ....

'ಪಂಜಾಬ್ ಸಿಂಹ' ಕೆಪಿಎಸ್ ಗಿಲ್ ನಿಧನ
ಕೆಪಿಎಸ್ ಗಿಲ್
Published On :
ನವದೆಹಲಿ: ಪಂಜಾಬ್ ಸಿಂಹ ಎಂದೇ ಖ್ಯಾತರಾಗಿದ್ದ ಪಂಜಾಬ್ ಮಾಜಿ ಪೊಲೀಸ್ ಮಹಾ ನಿರ್ದೇಶಕ ಕೆಪಿಎಸ್ ಗಿಲ್ ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹೃದಯ ಸಂಬಂಧಿ ಕಾಯಿಲೆ ಹಾಗೂ ಮೂತ್ರಪಿಂಡದ ವೈಫಲ್ಯದಿಂದ ಬಳಲುತ್ತಿದ್ದ ಗಿಲ್ ಅವರನ್ನು ನಗರದ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. 
82 ವರ್ಷದ ಗಿಲ್ ಅವರು ಕೇಂದ್ರಿಯ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್) ನಿರ್ದೇಶಕರಾಗಿ ಹಾಗೂ ಎರಡು ಬಾರಿ ಪಂಜಾಬ್ ಪೊಲೀಸ್ ಮಹಾ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.
ಪದ್ಮ ಶ್ರೀ ಪ್ರಶಸ್ತಿ ವಿಜೇತ 1958ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ ಕೆಪಿಎಸ್ ಗಿಲ್ ಅವರನ್ನು ಮಾಧ್ಯಮಗಳು ಸೂಪರ್ ಕಾಪ್ ಎಂದೇ ಕರೆಯುತ್ತಿದ್ದವು. 1989 ರಲ್ಲಿ ಗಿಲ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಗಿಲ್ 1995ರಲ್ಲಿ ಸೇವೆಯಿಂದ ನಿವೃತ್ತಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.