ದೇಶ

ದೇಶದ ಎಲ್ಲಾ 125 ಕೋಟಿ ಜನರಿಗೆ ಉದ್ಯೋಗ ಕಲ್ಪಿಸುವುದು ಅಸಾಧ್ಯ:ಅಮಿತ್ ಶಾ

ದೇಶದ ಎಲ್ಲ 125 ಕೋಟಿ ಜನರಿಗೆ ನಾವು ಉದ್ಯೋಗ ಕಲ್ಪಿಸಿಕೊಡುವುದು ಅಸಾಧ್ಯವಾದ ಕೆಲಸ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ...

ದೇಶದ ಎಲ್ಲಾ 125 ಕೋಟಿ ಜನರಿಗೆ ಉದ್ಯೋಗ ಕಲ್ಪಿಸುವುದು ಅಸಾಧ್ಯ:ಅಮಿತ್ ಶಾ
ಅಮಿತ್ ಶಾ
Published On :
ನವದೆಹಲಿ: ದೇಶದ ಎಲ್ಲ 125 ಕೋಟಿ ಜನರಿಗೆ ನಾವು ಉದ್ಯೋಗ ಕಲ್ಪಿಸಿಕೊಡುವುದು ಅಸಾಧ್ಯವಾದ ಕೆಲಸ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. 
ಎನ್‌ಡಿಎ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭರವಸೆ ನೀಡಿದಷ್ಟು ಉದ್ಯೋಗಾವಕಾಶ ಸೃಷ್ಟಿಸಿಲ್ಲ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ತಿರುಗೇಟು ನೀಡಿದ್ದಾರೆ.
ನರೇಂದ್ರ ಮೋದಿ ಸರ್ಕಾರ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ಕಳೆದ ಮೂರು ವರ್ಷಗಳ ಆಡಳಿತದಲ್ಲಿ ಒಂದೇ ಒಂದು ಭ್ರಷ್ಟಾಚಾರದ ಪ್ರಕರಣ ದಾಖಲಾಗಿಲ್ಲ. ಜಾತೀವಾದ, ಕುಟುಂಬ ರಾಜಕಾರಣವನ್ನು ಕೊನೆಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಕಳೆದ 70 ವರ್ಷಗಳಲ್ಲಿ ಮಾಡಲಾಗದ ಕೆಲಸವನ್ನು ಈಗಿನ ಸರ್ಕಾರ ಅತ್ಯಲ್ಪ ಅವಧಿಯಲ್ಲಿ ಮಾಡಬೇಕೆಂದರೆ ಕಷ್ಟಸಾಧ್ಯ ಎಂದು ಅವರು ಹೇಳಿದ್ದಾರೆ.
ಉದ್ಯೋಗಾವಕಾಶಕ್ಕೆ ಹೊಸ ದೃಷ್ಟಿಕೋನ ನೀಡಲು ನಾವು ಪ್ರಯತ್ನಿಸಿದ್ದೇವೆ. ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ. ಎಂಟು ಕೋಟಿಯಷ್ಟು ಜನ ಸ್ವ ಉದ್ಯೋಗದಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವಲ್ಲಿ ಸರ್ಕಾರ ಯಶಸ್ವಿಯಾಗಿದೆ’ ಎಂದು ಷಾ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.