ದೆಹಲಿ ಹೊಟೆಲ್ ನಲ್ಲಿ ಅನಿವಾಸಿ ಭಾರತೀಯ ಯುವತಿ ಮೇಲೆ ಅತ್ಯಾಚಾರ!
ರಾಜಧಾನಿ ದೆಹಲಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮುಂದುವರೆದಿದ್ದು, ಖಾಸಗಿ ಹೊಟೆಲ್ ನಲ್ಲಿ ತಂಗಿದ್ದ ಅನಿವಾಸಿ ಭಾರತೀಯ ಯುವತಿಯೊಬ್ಬರನ್ನು ಯುವಕನೋರ್ವ ಅತ್ಯಾಚಾರ ಮಾಡಿದ್ದಾನೆ ಎಂದು ದೂರು ದಾಖಲಿಸಲಾಗಿದೆ.

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮುಂದುವರೆದಿದ್ದು, ಖಾಸಗಿ ಹೊಟೆಲ್ ನಲ್ಲಿ ತಂಗಿದ್ದ ಅನಿವಾಸಿ ಭಾರತೀಯ ಯುವತಿಯೊಬ್ಬರನ್ನು ಯುವಕನೋರ್ವ ಅತ್ಯಾಚಾರ ಮಾಡಿದ್ದಾನೆ ಎಂದು ದೂರು ದಾಖಲಿಸಲಾಗಿದೆ.
ದೆಹಲಿಯ ನಬಿ ಕರೀಂ ಪ್ರದೇಶದಲ್ಲಿ ಘಟನೆ ನಡೆದಿದ್ದು, 22 ವರ್ಷದ ಅನಿವಾಸಿ ಭಾರತೀಯ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಹರ್ಯಾಣ ಮೂಲದ 25 ವರ್ಷದ ಯುವಕನನ್ನು ಬಂಧಿಸಲಾಗಿದೆ. ಪೊಲೀಸ್ ಮೂಲಗಳು ತಿಳಿಸಿರುವಂತೆ ಯುವತಿಯು ಅಮೆರಿಕದಿಂದ ಭಾರತಕ್ಕೆ ಬಂದ ಬಳಿಕ ಮೂವರು ಯುವಕರೊಂದಿಗೆ ಪರಿಚಯವಾಗಿದ್ದು, ಇವರನ್ನು ಇದೇ ಬುಧವಾರ ಔತಣ ಕೂಟಕ್ಕೆ ಅಹ್ವಾನಿಸಿದ್ದಳು. ಹೀಗೆ ಔತಣಕೂಟಕ್ಕೆ ಹೋಗಿದ್ದಾಗ ಇತರ ಇಬ್ಬರು ಸ್ನೇಹಿತರು ಶಾಪಿಂಗ್ ಗೆ ತೆರಳಿದರು.
ಇದೇ ಸಂದರ್ಭವನ್ನು ತನ್ನ ಕುಕೃತ್ಯಕ್ಕೆ ಬಳಕೆ ಮಾಡಿಕೊಂಡ ಮೂರನೇ ಯುವಕ ಕೊಠಡಿಯಲ್ಲೇ ಯುವತಿ ಮೇಲೆ ಅತ್ಯಾಚಾರ ವೆಸಗಿದ್ದಾನೆ ಎಂದು ಸಂತ್ರಸ್ತ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. ಇನ್ನು ಯುವತಿಯ ದಾಖಲೆಗಳನ್ನು ಪರಿಶೀಲಿಸಿರುವ ಪೊಲೀಸರು ಈಕೆ ಅಧ್ಯಯನದ ವೀಸಾದ ಮೂಲಕ ಭಾರತಕ್ಕೆ ಆಗಮಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ಹೊಟೆಲ್ ನಲ್ಲಿನ ಸಿಸಿಟಿವಿ ದೃಶ್ಯಾವಳಿ ಹಾಗೂ ಲಾಗ್ ಬುಕ್ ವಶಪಡಿಸಿಕೊಂಡು ಅದರ ಆಧಾರದ ಮೇಲೆ ಆರೋಪಿ ಯುವಕನನ್ನು ಬಂಧಿಸಿದ್ದಾರೆ.
ಅಂತೆಯೇ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿ ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಸಂತ್ರಸ್ತೆ ಯುವತಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


