ರಾಹುಲ್ ಗಾಂಧಿ ನಂತರ ಅಖಿಲೇಶ್ ಯಾದವ್ ಗೆ ಸಹರಾನಪುರ ಪ್ರವೇಶ ನಿರಾಕರಣೆ
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸಹರಾನಪುರಕ್ಕೆ ಭೇಟಿ ನೀಡುವುದನ್ನು ತಡೆದ ಪೊಲೀಸರು ಈಗ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್

Published On :
ಸಹರನಾಪುರ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸಹರಾನಪುರಕ್ಕೆ ಭೇಟಿ ನೀಡುವುದನ್ನು ತಡೆದ ಪೊಲೀಸರು ಈಗ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿಗೆ ನಿರ್ಬಂಧ ಹೇರಿದ್ದಾರೆ.
ಸಹರಾನಪುರಕ್ಕೆ ಭೇಟಿ ನೀಡುವುದನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಉತ್ತರ ಪ್ರದೇಶದ ಯೋಗಿ ಆದಿತ್ಯ ನಾಥ್ ಸರ್ಕಾರವನ್ನು ನಿಂದಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ.
ಇಂದು ದೇಶದಲ್ಲಿ ಬಲಹೀನರಿಗೆ ಹಾಗೂ ಬಡವರಿಗೆ ಸಮಾಜದಲ್ಲಿ ಬದುಕಲು ಅವಕಾಶವೇ ಇಲ್ಲದಂತಾಗಿದೆ. ಎಲ್ಲರಿಗೂ ರಕ್ಷಣೆ ಒದಗಿಸುವುದು ಸರ್ಕಾರದ ಕರ್ತವ್ಯ. ಆದರೆ ಎನ್ ಡಿಎ ಸರ್ಕಾರ ದೇಶಾದ್ಯಂತ ಬಲಹೀನರದಲ್ಲಿ ಭಯ ಹುಟ್ಟಿಸುತ್ತಿದೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


