ಕಪಿಲ್ ಮಿಶ್ರಾ ವಿರುದ್ಧ ಮಾನಹಾನಿ ಪ್ರಕರಣ, ವಿಚಾರಣೆಗೆ ದೆಹಲಿ ಕೋರ್ಟ್ ಒಪ್ಪಿಗೆ
ಆಮ್ ಆದ್ಮಿ ಪಕ್ಷ ಹಾಗೂ ದೆಹಲಿ ಸರ್ಕಾರದ ವಿರುದ್ಧ ಸರಣಿ ಆರೋಗಳನ್ನು ಮಾಡಿದ್ದ ದೆಹಲಿ ಮಾಜಿ ಸಚಿವ ಹಾಗೂ ಉಚ್ಚಾಟಿತ....

Published On :
ನವದೆಹಲಿ: ಆಮ್ ಆದ್ಮಿ ಪಕ್ಷ ಹಾಗೂ ದೆಹಲಿ ಸರ್ಕಾರದ ವಿರುದ್ಧ ಸರಣಿ ಆರೋಗಳನ್ನು ಮಾಡಿದ್ದ ದೆಹಲಿ ಮಾಜಿ ಸಚಿವ ಹಾಗೂ ಉಚ್ಚಾಟಿತ ಆಪ್ ನಾಯಕ ಕಪಿಲ್ ಮಿಶ್ರ ಅವರ ವಿರುದ್ಧ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು ಸಲ್ಲಿಸಿದ್ದ ಕ್ರಿಮಿನಲ್ ಮಾನಹಾನಿ ಪ್ರಕರಣವನ್ನು ದೆಹಲಿ ಕೋರ್ಟ್ ಸೋಮವಾರ ವಿಚಾರಣೆ ಪಟ್ಟಿಗೆ ಸೇರಿಸಿದೆ.
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿಕೊಂಡ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಶೆಫಾಲಿ ಬರ್ನಾಲ್ ಟಂಡನ್ ಅವರು, ಜುಲೈ 14ಕ್ಕೆ ವಿಚಾರಣೆ ನಿಗದಿಪಡಿಸಿದ್ದಾರೆ.
ಕಪಿಲ್ ಮಿಶ್ರಾ ಅವರು ರಾಷ್ಟ್ರೀಯ ಮಾಧ್ಯಮಗಳ ಮುಂದೆ ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವ ಮೂಲಕ ತಮ್ಮ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಸತ್ಯೇಂದ್ರ ಜೈನ್ ಅವರು ಮೇ 19ರಂದು ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಿಲಿಸಿದ್ದರು.
ದೆಹಲಿ ಸಚಿವ ಸ್ಥಾನದಿಂದ ವಜಾಗೊಂಡ ನಂತರ ಕಪಿಲ್ ಮಿಶ್ರಾ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ವಿರುದ್ಧ ನೀರಿನ ಟ್ಯಾಂಕರ್ ಹಗರಣ, ಆರೋಗ್ಯ ಇಲಾಖೆಯಲ್ಲಿ ಔಷಧಿ ಹಗರಣ ಸೇರಿದಂತೆ ಹಲವು ಆರೋಪಗಳನ್ನು ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


