ಚುನಾವಣಾ ಆಯೋಗ ಲಂಚ ಪ್ರಕರಣ: ದಿನಕರನ್ ನ್ಯಾಯಾಂಗ ಬಂಧನ ಜೂನ್ 12ಕ್ಕೆ ವಿಸ್ತರಣೆ
ಚುನಾವಣಾ ಆಯೋಗದ ಲಂಚ ಪ್ರಕರಣದಲ್ಲಿ ಎಐಎಡಿಎಂಕೆ ನಾಯಕ ಟಿಟಿವಿ ದಿನಕರನ್...

Published On :
ನವದೆಹಲಿ: ಚುನಾವಣಾ ಆಯೋಗದ ಲಂಚ ಪ್ರಕರಣದಲ್ಲಿ ಎಐಎಡಿಎಂಕೆ ನಾಯಕ ಟಿಟಿವಿ ದಿನಕರನ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ಕೋರ್ಟ್ ಜೂನ್ 12ರವರೆಗೆ ಮುಂದೂಡಿದೆ.
ಇದಕ್ಕೂ ಮುನ್ನ ಮೇ 26ರಂದು ಟೀಸ್ ಹಝಾರಿ ಕೋರ್ಟ್ ದಿನಕರನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಮೇ 26ಕ್ಕೆ ಮುಂದೂಡಿತ್ತು. ವಿಚಾರಣಾ ಅಧಿಕಾರಿಗಳು ಸಿಗದಿದ್ದ ಕಾರಣ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿತ್ತು.
ದೆಹಲಿ ಪೊಲೀಸರು ಇದಕ್ಕೂ ಮುನ್ನ ಆಪಾದಿತ ಮಧ್ಯವರ್ತಿ ಸುಕೇಶ್ ಚಂದ್ರಶೇಖರ್ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದ್ದ ಕಾರಣ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿತ್ತು.
ಸುಕೇಶ್ ವಿರುದ್ಧ ಹಲವು ಕೇಸುಗಳು ವಿಚಾರಣೆಯಾಗದೆ ಉಳಿದಿವೆ ಎಂದು ದೆಹಲಿ ಪೊಲೀಸರು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


