ರಾಜ್ಯಪಾಲರ ಆಡಳಿತ ಹೇರಿದರೆ ಜಮ್ಮು-ಕಾಶ್ಮೀರ ಸುರಕ್ಷಿತವಾಗಿರುತ್ತದೆ: ಫರೂಖ್ ಅಬ್ದುಲ್ಲಾ
ಉದ್ವಿಗ್ನತೆ ಹಾಗೂ ಹಿಂಸಾಚಾರಗಳನ್ನು ಹತ್ತಿಕ್ಕಬೇಕಾದರೆ, ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಹೇರುವುದೊಂದೇ ಉಳಿದಿರುವ ದಾರಿ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ...

Published On :
ಶ್ರೀನಗರ: ಉದ್ವಿಗ್ನತೆ ಹಾಗೂ ಹಿಂಸಾಚಾರಗಳನ್ನು ಹತ್ತಿಕ್ಕಬೇಕಾದರೆ, ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಹೇರುವುದೊಂದೇ ಉಳಿದಿರುವ ದಾರಿ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫರೂಖ್ ಅಬ್ದುಲ್ಲಾ ಅವರು ಸೋಮವಾರ ಹೇಳಿದ್ದಾರೆ.
ರಾಜ್ಯಪಾಲರ ಆಡಳಿತ ಹೇರುವುದಕ್ಕೆ ನಾವು ಈ ಹಿಂದೆ ಎಂದಿಗೂ ಪ್ರೋತ್ಸಾಹವನ್ನು ನೀಡಿರಲಿಲ್ಲ. ಇದಕ್ಕೆ ನಾವು ಯಾವಾಗಲೂ ವಿರೋಧ ವ್ಯಕ್ತಪಡಿಸುತ್ತಿದ್ದೆವು. ಆದರೆ, ಇದೀಗ ಕಾಶ್ಮೀರ ಸುರಕ್ಷಿತವಾಗಿರಬೇಕೆಂದರೆ ರಾಜ್ಯಪಾಲರ ಆಡಳಿತ ಹೇರುವುದೊಂದೇ ಉಳಿದಿರುವ ದಾರಿಯಾಗಿದೆ ಎಂದು ಹೇಳಿದ್ದಾರೆ.
ಕಾಶ್ಮೀರದಲ್ಲಿನ ಪರಿಸ್ಥಿತಿಗೆ ಶಾಂತಿ ಮೂಲಕ ಅಂತ್ಯ ಹಾಡಬೇಕೆಂದು ಪ್ರಧಾನಿ ಮೋದಿಯವರು ಬಯಸಿದ್ದಾರೆ. ಪ್ರಧಾನಮಂತ್ರಿಗಳೊಂದಿಗೆ ನಡೆಸಲಾದ ಚರ್ಚೆ ಬಗ್ಗೆ ನಾನು ಯಾವುದೇ ಮಾಹಿತಿಗಳನ್ನು ನೀಡುವುದಿಲ್ಲ. ಆದರೆ, ಕಾಶ್ಮೀರದಲ್ಲಿ ಶಾಂತಿಯನ್ನು ಮರುಸ್ಥಾಪನೆ ಮಾಡಬೇಕೆಂದು ಪ್ರಧಾನಮಂತ್ರಿಗಳು ಬಯಸಿದ್ದಾರೆಂಬುದನ್ನು ಮಾತ್ರ ನಾನು ಹೇಳುತ್ತೇನೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಆಡಳಿತ ನಡೆಸುವುದರಲ್ಲಿ ಮುಫ್ತಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಕೇವಲ ದಕ್ಷಿಣ ಕಾಶ್ಮೀರದಲ್ಲಷ್ಟೇ ಅಲ್ಲದೆ, ಇಡೀ ಕಾಶ್ಮೀರದಲ್ಲಿ ಪರಿಸ್ಥಿತಿ ದುರಂತಕ್ಕೆ ತಿರುಗಿದೆ. ಈ ದುರಂತಗಳು ಇಡೀ ದೇಶದಲ್ಲಿ ಕೋಮು ಘರ್ಷಣೆಗೆ ಕಾರಣವಾಗುತ್ತಿದೆ. ಹೀಗಾಗಿ ಶೀಘ್ರದಲ್ಲೇ ಈ ಸಮಸ್ಯೆಗೆ ಅಂತ್ಯ ಹಾಡಬೇಕಿದೆ. ಕಾಶ್ಮೀರ ಈಗಲೇ ಕುದಿಯುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿ ಪ್ರಚೋದನಾತ್ಮಕ ಹೇಳಿಕೆಯನ್ನು ನೀಡಬಾರದು. ಎಲ್ಲರದ್ದೂ ಒಂದೇ ದನಿಯಾಗಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶಾಂತಿಯನ್ನು ಪಠಿಸುತ್ತಿದ್ದು, ಎಲ್ಲರೂ ಅವರ ಮಾತನ್ನು ಕೇಳಬೇಕಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿಜಮ್ಮು ಮತ್ತು ಕಾಶ್ಮೀರJammu and Kashmirgovernor ruleFarooq Abdullahರಾಜ್ಯಪಾಲರ ಆಡಳಿತಫರೂಖ್ ಅಬ್ದುಲ್ಲಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


