ರಾಜಸ್ತಾನ: ಮಾರ್ಟರ್ ಬಾಂಬ್ ಆಕಸ್ಮಿಕ ಸ್ಫೋಟ, 6 ಯೋಧರಿಗೆ ಗಾಯ
ರಾಜಸ್ತಾನದಲ್ಲಿ ಆಕಸ್ಮಿಕವಾಗಿ ಮಾರ್ಟಲ್ ಬಾಂಬ್ ವೊಂದು ಸ್ಫೋಟಗೊಂಡಿದ್ದು, ಪರಿಣಾಮ ಗಡಿ ಭದ್ರತಾ ಪಡೆಯ 6 ಯೋಧರಿಗೆ ಗಾಯವಾಗಿರುವ...

Published On :
ಕಿಶನ್ ಗಡ್: ರಾಜಸ್ತಾನದಲ್ಲಿ ಆಕಸ್ಮಿಕವಾಗಿ ಮಾರ್ಟಲ್ ಬಾಂಬ್ ವೊಂದು ಸ್ಫೋಟಗೊಂಡಿದ್ದು, ಪರಿಣಾಮ ಗಡಿ ಭದ್ರತಾ ಪಡೆಯ 6 ಯೋಧರಿಗೆ ಗಾಯವಾಗಿರುವ ಘಟನೆ ಮಂಗಳವಾರ ನಡೆದಿದೆ.
51 ಎಂಎಂ ಮಾರ್ಟರ್ ಬಾಂಬ್ ಆಕಸ್ಮಿಕವಾಗಿ ಸ್ಫೋಟಗೊಂಡಿದೆ. ಈ ವೇಳೆ ಸ್ಥಳದಲ್ಲಿದ್ದ 6 ಯೋಧರಿಗೆ ಗಾಯವಾಗಿದೆ. ಗಾಯಗೊಂಡಿರುವ 6 ಯೋಧರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗಂಭೀರವಾಗಿ ಗಾಯಗೊಂಡ ಯೋಧರನ್ನು ಹೆಲಿಕಾಪ್ಟರ್ ಗಳ ಮೂಲಕ ಜೋಧ್ಪುರಕ್ಕೆ ಕರೆದೊಯ್ಯಲಾಗಿದ್ದು, ಚಿಕಿತ್ಸೆಕೊಡಿಸಲಾಗುತ್ತಿದೆ. ಇನ್ನುಳಿದ ನಾಲ್ವರು ಯೋಧರನ್ನು ರಾಮಗಢ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


