ದೇಶ

ಬಿಯರ್ ಬಾರ್ ಉದ್ಘಾಟಿಸಿದ ಸಚಿವೆ: ವಿವರಣೆ ಕೇಳಿದ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಮಹಿಳಾ ಸಚಿವೆಯೊಬ್ಬರು ಬಿಯರ್ ಉದ್ಘಾಟಿಸಿರುವ ಫೋಟೋ ವೈರಲ್ ಆಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ..

ಬಿಯರ್ ಬಾರ್ ಉದ್ಘಾಟಿಸಿದ ಸಚಿವೆ: ವಿವರಣೆ ಕೇಳಿದ ಯೋಗಿ ಆದಿತ್ಯನಾಥ್
ಬಿಯರ್ ಬಾರ್ ಉದ್ಘಾಟಿಸುತ್ತಿರುವ ಸಚಿವೆ ಸ್ವಾತಿ ಸಿಂಗ್
Published On :
ಲಕ್ನೋ: ಉತ್ತರ ಪ್ರದೇಶದ ಮಹಿಳಾ ಸಚಿವೆಯೊಬ್ಬರು ಬಿಯರ್  ಬಾರ್ ಉದ್ಘಾಟಿಸಿರುವ ಫೋಟೋ ವೈರಲ್ ಆಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಬೀರ್ ಬಾರ್ ಉದ್ಘಾಟನೆ ಮಾಡಿದ್ದು, ಇದೀಗ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. 
ಇದರ ವಿರುದ್ಧ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಬಗ್ಗೆ ವರದಿ ಕೇಳಿದ್ದಾರೆ.
ಸ್ವಾತಿ ಸಿಂಗ್ ಅವರು ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ದಯಾಶಂಕರ್ ಸಿಂಗ್ ಅವರ ಪತ್ನಿಯಾಗಿದ್ದಾರೆ.
ಸ್ವಾತಿ ಸಿಂಗ್ ರಾಜಕೀಯಕ್ಕೆ ಹೊಸಬರಾಗಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸರೋಜಿನಿ ನಗರ ವಿಧಾನಸಭೆ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿ ಸಚಿವೆಯಾಗಿದ್ದಾರೆ. 
ಐಪಿಎಸ್ ಅಧಿಕಾರಿಗಳಿಗೂ ವಿವರಣೆ ನೀಡುವಂತೆ ಲಕ್ನೋ ಐಜಿಪಿ ಜೆ.ಎನ್ ಸಿಂಗ್ ಆದೇಶಿಸಿದ್ದಾರೆ.ಈ ಸಂಬಂಧ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಅಜಯ್ ಕುಮಾರ್ ಲಲ್ಲು, ಇದು  ಬಿಜೆಪಿ ಸರ್ಕಾರದ ಅಸಲಿ ಮುಖ ಎಂದು ಟೀಕಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.