ದೇಶ

ಅಯೋಧ್ಯೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್: ರಾಮಜನ್ಮ ಭೂಮಿಯಲ್ಲಿ ವಿಶೇಷ ಪೂಜೆ

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಅಯೋಧ್ಯೆಗೆ ಭೇಟಿ ನೀಡಿದ್ದು, ರಾಮ ಜನ್ಮ ಭೂಮಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ...

ಅಯೋಧ್ಯೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್: ರಾಮಜನ್ಮ ಭೂಮಿಯಲ್ಲಿ ವಿಶೇಷ ಪೂಜೆ
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
Published On :
ಲಖನೌ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಅಯೋಧ್ಯೆಗೆ ಭೇಟಿ ನೀಡಿದ್ದು, ರಾಮ ಜನ್ಮ ಭೂಮಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. 
ವಿವಾದಿತ ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಚು ಹೂಡಿದ ಪ್ರಕರಣದಲ್ಲಿ ಬಿಜೆಪಿ ವರಿಷ್ಠ ಎಲ್.ಕೆ. ಅಡ್ವಾಣಿ, ಕೇಂದ್ರ ಸಚಿವೆ ಉಮಾ ಭಾರತಿ ಮತ್ತಿತರರ ವಿರುದ್ಧ ನ್ಯಾಯಾಲಯ ಆರೋಪ ನಿಗದಿಪಡಿಸಿದ ಮರುದಿನವೇ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಗೆ ಭೇಟಿ ನೀಡಿದ್ದಾರೆ. 
ಆಯೋಧ್ಯೆಗೆ ಯೋಗಿ ಆದಿತ್ಯನಾಥ್ ಅವರು ಭೇಟಿ ನೀಡುತ್ತಿದ್ದಂತೆಯೇ ಸ್ಥಳದಲ್ಲಿದ್ದ ಜನರು, ಜೈ ಶ್ರೀರಾಮ್, ಮಂದಿನ ವಹೀ ಬಾನಾಯೇಂಗೆ ಎಂದು ಘೋಷಣೆ ಕೂಗು ಮೂಲಕ ಸ್ವಾಗತ ಕೋರಿದರು. 
ನಂತರ ರಾಮ ಜನ್ಮ ಭೂಮಿ ರಾಮ್ ಲಾಲ್ ದೇವಾಲಯ ಹಾಗೂ ಹನುಮಾನ್ ದೇವಸ್ಥಾನಕ್ಕೆ ತೆರಳಿದ ಯೋಗಿ ಆದಿತ್ಯನಾಥ್ ಅವರು ವಿಶೇಷ ಪೂಜೆ ಸಲ್ಲಿಸಿದರು. 
ಯೋಗಿ ಆದಿತ್ಯನಾಥ್ ಅವರು 1992ರ ಡಿಸೆಂಬರ್ 6ನೇ ತಾರೀಖಿನ ನಂತರ ಅಯೋಧ್ಯೆಗೆ ಭೇಟಿ ನೀಡುತ್ತಿರುವ ಮೊದಲ ಮುಖ್ಯಮಂತ್ರಿಯಾಗಿದ್ದಾರೆ. 1991ರಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಕಲ್ಯಾಣ್ ಸಿಂಗ್ ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆ ವಿವಾದಿತ ಅಯೋಧ್ಯೆಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.