ದೇಶ

ಕದನ ವಿರಾಮ ಉಲ್ಲಂಘನೆ: 5 ಪಾಕ್ ಯೋಧರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಗಡಿಯಲ್ಲಿ ಅಪ್ರಚೋದಿತ ದಾಳಿ ನಡೆಸಿ ಕದನ ವಿರಾಮ ಉಲ್ಲಂಘನೆ ಮಾಡಿದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮುಟ್ಟಿನೋಡಿಕೊಳ್ಳುವಂತಹ ಹೊಡೆತ ನೀಡಿದ್ದು, 5 ಪಾಕಿಸ್ತಾನದ ಯೋಧರನ್ನು ಹತ್ಯೆ ಮಾಡಿದೆ.

ಕದನ ವಿರಾಮ ಉಲ್ಲಂಘನೆ: 5 ಪಾಕ್ ಯೋಧರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಭಾರತೀಯ ಸೇನೆ
Published On :
ನವದೆಹಲಿ: ಗಡಿಯಲ್ಲಿ ಅಪ್ರಚೋದಿತ ದಾಳಿ ನಡೆಸಿ ಕದನ ವಿರಾಮ ಉಲ್ಲಂಘನೆ ಮಾಡಿದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮುಟ್ಟಿನೋಡಿಕೊಳ್ಳುವಂತಹ ಹೊಡೆತ ನೀಡಿದ್ದು, 5 ಪಾಕಿಸ್ತಾನದ ಯೋಧರನ್ನು ಹತ್ಯೆ ಮಾಡಿದೆ. 
ಜು.1 ರಂದು ಬೆಳಿಗ್ಗೆ ಜಮ್ಮು-ಕಾಶ್ಮೀರದ ರಜೌರಿ ಹಾಗೂ ಪೂಂಚ್ ಜಿಲ್ಲೆಗಳಲ್ಲಿ ಪಾಕಿಸ್ತಾನ ಅಪ್ರಚೋದಿತ ದಾಳಿ ನಡೆಸಿ ಮೋಟಾರ್ ಶೆಲ್ಲಿಂಗ್ ಹಾಗೂ ಸ್ವಯಂಚಾಲಿತ ಶಸ್ತ್ರಾಸ್ತ್ರಗಳ ಮೂಲಕ ದಾಳಿ ನಡೆಸುವ ಮೂಲಕ ಕದನ ವಿರಾಮವನ್ನು ಉಲ್ಲಂಘಿಸಿತ್ತು. ಈ ದಾಳಿಯಲ್ಲಿ ಜನರಲ್ ರಿಸರ್ವ್ ಇಂಜಿನಿಯರಿಂಗ್ ಫೋರ್ಸ್ ( ಜಿಆರ್ ಇಎಫ್)ನ ಓರ್ವ ಸಿಬ್ಬಂದಿ ಸಾವನ್ನಪ್ಪಿದರೆ ಓರ್ವ ಬಿಎಸ್ ಎಫ್ ಯೋಧ ಸೇರಿ 5 ಸಿಬ್ಬಂದಿಗಳು ಗಾಯಗೊಂಡಿದ್ದರು. 
ಪಾಕಿಸ್ತಾನದ ಪುಂಡಾಟಿಕೆಗೆ ತಕ್ಕ ಪ್ರತ್ಯುತ್ತರ ನೀಡಿರುವ ಭಾರತ ಅಪ್ರಚೋದಿತ ದಾಳಿ ನಡೆಸಿದ ಪಾಕಿಸ್ತಾನದ ಯೋಧರ ಪೈಕಿ 5 ಯೋಧರನ್ನು ಹತ್ಯೆ ಮಾಡಿದ್ದು 6 ಯೋಧರನ್ನು ತೀವ್ರವಾಗಿ ಘಾಸಿಗೊಳಿಸಿದೆ. ಪೂಂಚ್ ಹಾಗೂ ರಜೌರಿ ಜಿಲ್ಲೆಗಳಲ್ಲಿರುವ ಸೆಕ್ಟರ್ ಗಳ ಗಡಿನಿಯಂತ್ರಣ ರೇಖೆಗಳಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡುವುದನ್ನು ಮುಂದುವರೆಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.