ಚೆನ್ನೈ ಸಿಲ್ಕ್ ಶೋರೂಂ ಅಗ್ನಿ ಅವಘಡ: ಬೆಂಕಿ ರೌದ್ರಾವತಾರಕ್ಕೆ ಕುಸಿಯುತ್ತಿದೆ ಇಡೀ ಕಟ್ಟಡ!
ಚೆನ್ನೈನ ಟಿ.ನಗರದಲ್ಲಿರುವ ಚೆನ್ನೈ ಸಿಲ್ಕ್ ಶೋ ರೂಂನಲ್ಲಿ ಬುಧವಾರ ಸಂಭವಿಸಿದ ಭೀಕರ ಅಗ್ನಿ ಅವಘಡದ ಕಾರ್ಯಾಚರಣೆ 2ನೇ ದಿನಕ್ಕೆ ಕಾಲಿಟ್ಟಿದ್ದು, ಬೆಂಕಿ ರೌದ್ರಾವತರಕ್ಕೆ ಇಡೀ ಕಟ್ಟಡವೇ ಕುಸಿಯುವ ಭೀತಿ ಎದುರಾಗಿದೆ.

ಚೆನ್ನೈ: ಚೆನ್ನೈನ ಟಿ.ನಗರದಲ್ಲಿರುವ ಚೆನ್ನೈ ಸಿಲ್ಕ್ ಶೋ ರೂಂನಲ್ಲಿ ಬುಧವಾರ ಸಂಭವಿಸಿದ ಭೀಕರ ಅಗ್ನಿ ಅವಘಡದ ಕಾರ್ಯಾಚರಣೆ 2ನೇ ದಿನಕ್ಕೆ ಕಾಲಿಟ್ಟಿದ್ದು, ಬೆಂಕಿ ರೌದ್ರಾವತರಕ್ಕೆ ಇಡೀ ಕಟ್ಟಡವೇ ಕುಸಿಯುವ ಭೀತಿ ಎದುರಾಗಿದೆ.
ನಿನ್ನೆ ಆರಂಭವಾಗಿದ್ದ ಬೆಂಕಿ ನಂದಿಸುವ ಕಾರ್ಯ ಇಂದೂ ಮುಂದುವರೆದಿದ್ದು, 10ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಇನ್ನು ಇಂದು ಮುಂಜಾನೆ ಕಟ್ಟಡದ 4 ರಿಂದ 7ನೇ
ಅಂತಸ್ತಿನ ವರೆಗಿನ ಕಟ್ಟಡ ಕುಸಿದಿದ್ದು, ಅದೃಷ್ಟವಶಾತ್ ಈ ವೇಳೆ ಕಟ್ಟದಲ್ಲಿ ಯಾರೂ ಇರಲಿಲ್ಲ. ಅಪಾಯದ ಮುನ್ಸೂಚನೆ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ಕೂಡ ಕಟ್ಟಡದಿಂದ ದೂರ ಉಳಿದಿದ್ದರು. ಹೀಗಾಗಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಸ್ತುತ ಘಟನಾ ಸ್ಥಳದಲ್ಲಿ 60 ಅಗ್ನಿ ಶಾಮಕ ವಾಹನಗಳು ಮೊಕ್ಕಾಂ ಹೂಡಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಈಗಲೂ ನಡೆಯುತ್ತಿದೆ. ಇನ್ನು ಘಟನಾ ಸ್ಥಳದಲ್ಲಿ ಅಗ್ನಿ ಶಾಮಕ ದಳದ ಜಂಟಿ ನಿರ್ದೇಶಕ ಸಾಹುಲ್ ಹಮೀದ್ ಹಾಗೂ ಇತರೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ತುರ್ತು ಪರಿಸ್ಥಿತಿಗಳಿಗಾಗಿ 104 ಹಾಗೂ 108 ನಂಬರ್ ಗಳನ್ನು ಬಳಕೆ ಮಾಡಿಕೊಳ್ಳಲು ಆದೇಶ ನೀಡಿದ್ದಾರೆ. ಅಂತೆಯೇ ಘಟನಾ ಸ್ಥಳದಲ್ಲಿ ಹಲವು ಆ್ಯಂಬುಲೆನ್ಸ್ ವಾಹನಗಳನ್ನು ಆಕ್ಸಿಜನ್ ಸಮೇತ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


