ಚುನಾವಣಾ ಆಯೋಗಕ್ಕೆ ಲಂಚ ನೀಡಿದ ಪ್ರಕರಣ: ದಿನಕರನ್, ಮಲ್ಲಿಕಾರ್ಜುನ್ ಗೆ ಜಾಮೀನು
ಪಕ್ಷದ ಎರಡು ಎಲೆ ಗುರುತಿಗಾಗಿ ಚುನಾವಣಾ ಆಯೋಗ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪಕ್ಕೆ...

Published On :
ನವದೆಹಲಿ: ಪಕ್ಷದ ಎರಡು ಎಲೆ ಗುರುತಿಗಾಗಿ ಚುನಾವಣಾ ಆಯೋಗ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪಕ್ಕೆ ಸಂಬಂಧಪಟ್ಟಂತೆ ದೆಹಲಿ ಕೋರ್ಟ್ ಇಂದು ಟಿ.ಟಿ.ವಿ. ದಿನಕರನ್ ಮತ್ತು ಆತನ ಸಹಚರ ಮಲ್ಲಿಕಾರ್ಜುನ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
ದೆಹಲಿಯ ತಿಜ್ ಹಜಾರಿ ನ್ಯಾಯಾಲಯ ಇಬ್ಬರಿಗೂ ವೈಯಕ್ತಿಕ ಬಾಂಡ್ 5 ಲಕ್ಷ ರೂಪಾಯಿ ನೀಡುವಂತೆ ಆದೇಶ ನೀಡಿದೆ. ಇಬ್ಬರೂ ತಮ್ಮ ಪಾಸ್ ಪೋರ್ಟ್ ನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿದೆ.
ಈ ವಿಷಯದಲ್ಲಿ ದಿನಕರನ್ ಗೆ ಮಧ್ಯವರ್ತಿಯಾಗಿದ್ದ ಸುಕೇಶ್ ಚಂದ್ರಶೇಖರ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಪೊಲೀಸರು ನಿರಾಕರಿಸಿದ್ದರು. ಆ ಬಳಿಕ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿತ್ತು.
ಸುಕೇಶ್ ವಿರುದ್ಧ ಅನೇಕ ಕೇಸುಗಳ ವಿಚಾರಣೆ ಬಾಕಿ ಉಳಿದಿದ್ದು, ಕೇಸಿಗೆ ಸಂಬಂಧಪಟ್ಟಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಬಂಧನಗಳು ಆಗಲಿವೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


