ಭೂಪಾಲ್ : ಹಿಂದಿ ದಿನಪತ್ರಿಕೆ ವರದಿಗಾರನನ್ನು ಗುಂಡಿಕ್ಕಿ ಹತ್ಯೆ
ಹಿಂದಿ ದಿನ ಪತ್ರಿಕೆ ವರದಿಗಾರನನ್ನು ಕಚೇರಿಯಲ್ಲಿಯೇ ಗುಂಡಿಟ್ಟು ಕೊಂದಿರುವ ಘಟನೆ ಮಧ್ಯಪ್ರದೇಶದ ಪಿಪ್ಲಿಲಾ ಮಂಡಿ ಪ್ರದೇಶದಲ್ಲಿ ...

Published On :
ಭೂಪಾಲ್: ಹಿಂದಿ ದಿನ ಪತ್ರಿಕೆ ವರದಿಗಾರನನ್ನು ಕಚೇರಿಯಲ್ಲಿಯೇ ಗುಂಡಿಟ್ಟು ಕೊಂದಿರುವ ಘಟನೆ ಮಧ್ಯಪ್ರದೇಶದ ಪಿಪ್ಲಿಲಾ ಮಂಡಿ ಪ್ರದೇಶದಲ್ಲಿ ನಡೆದಿದೆ.
42 ವರ್ಷದ ಕಮಲೇಶ್ ಜೈನ್ ಅವರ ಕಚೇರಿಗೆ ನಿನ್ನೆ ರಾತ್ರಿ ಸುಮಾರು 8.30 ಕ್ಕೆ ಆರು ಮಂದಿ ದುಷ್ಕರ್ಮಿಗಳು ಆಗಮಿಸಿದ್ದಾರೆ. ಈ ವೇಳೆ ಕಮಲೇಶ್ ಜೈನ್ ಎದೆಗೆ ಗುಂಡು ಹಾರಿಸಲಾಗಿದೆ ಎಂದು ಪಿಪ್ಲಿಯಾ ಮಂಡಿ ಇನ್ಸ್ ಪೆಕ್ಟರ್ ಅನಿಲ್ ಸಿಂಗ್ ಠಾಗೂರ್ ಹೇಳಿದ್ದಾರೆ.
ಈ ಸಂಬಂಧ ಇಂದು ಪೊಲೀಸರು ಆರು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು ಇಬ್ಬರನ್ನು ಬಂಧಿಸಿದ್ದಾರೆ. ಗುಂಡು ಹಾರಿಸಿದ ನಂತರ ಇಬ್ಬರು ಆರೋಪಿಗಳು ಸ್ಥಳದಿಂದ ಬೈಕ್ ನಲ್ಲಿ ಪರಾರಿಯಾಗಿದ್ದಾರೆ. ಜೈನ್ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಪರಿಶೀಲಿಸಿದ ವೈದ್ಯರು ಅವರು ಸಾವನ್ನಪ್ಪಿರುವುದಾಗಿ ತಿಳಿಸಿದರು.
ಕೊಲೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


