ದೇಶ

ಭೋಪಾಲ್: ಪೊಲೀಸ್ ಅಧಿಕಾರಿಯ ಪುತ್ರಿಯ ಮೇಲೆ ಸಾಮೂಹಿಕ ಅತ್ಯಾಚಾರ!

ಪೊಲೀಸ್ ಅಧಿಕಾರಿಯೊಬ್ಬರ ಪುತ್ರಿಯನ್ನೇ ನಾಲ್ಕು ಮಂದಿ ದುಷ್ಕರ್ಮಿಗಳು ತಮ್ಮ ಕಾಮತೃಷೆಗೆ ಬಳಿಸಿಕೊಂಡ ಅಮಾನವೀಯ ಘಟನೆ ಮಧ್ಯ ಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ನಡೆದಿದೆ.

ಭೋಪಾಲ್: ಪೊಲೀಸ್ ಅಧಿಕಾರಿಯ ಪುತ್ರಿಯ ಮೇಲೆ ಸಾಮೂಹಿಕ ಅತ್ಯಾಚಾರ!
ಸಂಗ್ರಹ ಚಿತ್ರ
Published On :
ಭೋಪಾಲ್: ಪೊಲೀಸ್ ಅಧಿಕಾರಿಯೊಬ್ಬರ ಪುತ್ರಿಯನ್ನೇ ನಾಲ್ಕು ಮಂದಿ ದುಷ್ಕರ್ಮಿಗಳು ತಮ್ಮ ಕಾಮತೃಷೆಗೆ ಬಳಿಸಿಕೊಂಡ ಅಮಾನವೀಯ ಘಟನೆ ಮಧ್ಯ ಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ನಡೆದಿದೆ.
ಭೋಪಾಲ್ ನಗರದ ಹಬೀಬ್‌ಗಂಜ್ ರೈಲು ನಿಲ್ದಾಣದ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತ ಯುವತಿ ಪೊಲೀಸ್ ಅಧಿಕಾರಿಯೊಬ್ಬರ ಪುತ್ರಿ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ 19 ವರ್ಷದ ಯುವತಿ ವಿಧಿಶಾ  ಮೂಲದವಳಾಗಿದ್ದು, ಆಕೆಯ ತಂದೆ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.  ಬಿಎಸ್ಸಿ ವಿದ್ಯಾರ್ಥಿನಿಯಾಗಿರುವ ಯುವತಿ ಎಂಪಿ ನಗರದ ಕೋಚಿಂಗ್ ಸೆಂಟರ್‌ನಲ್ಲಿ ನಾಗರಿಕ ಸೇವಾ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದಳು.  ತವರು ವಿದಿಶಾಗೆ ತೆರಳಲು ಹಬೀಬ್‌ ಗಂಜ್ ರೈಲು ನಿಲ್ದಾಣಕ್ಕೆ ಬರುತ್ತಿದ್ದರು. ನಿಲ್ದಾಣದಲ್ಲಿ ಒಂಟಿಯಾಗಿದ್ದ ಯುವತಿಯನ್ನು ಕಂಡ ದುಷ್ಕರ್ಮಿಗಳು ಸಂಜೆ 6:30ರ ವೇಳೆಗೆ ಆಕೆಯನ್ನು ಅಡ್ಡಗಟ್ಟಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ  ಸೆಳೆಯುವ ಯತ್ನ ಮಾಡಿದ್ದಾರೆ.  ಈ ವೇಳೆ ಅದಕ್ಕೆ ಯುವತಿ ಪ್ರತಿರೋಧ ಒಡ್ಡಿದಾಗ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದ ಇಬ್ಬರು ಆಕೆಯನ್ನು ಕಟ್ಟಿಹಾಕಿ ಅತ್ಯಾಚಾರ ಎಸಗಿದ್ದಾರೆ. ಬಳಿಕ ಮತ್ತಿಬ್ಬರು ಕೂಡ ಅತ್ಯಾಚಾರ  ಎಸಗಿ ಬಳಿಕ ಆಕೆಯ ಉಸಿರುಗಟ್ಟಿಸಿ ಕೊಲ್ಲಲು ಯತ್ನಿಸಿದ್ದಾರೆ. 
ಯುವತಿ ಪ್ರಜ್ಞೆ ತಪ್ಪಿದ್ದರಿಂದ ಆಕೆ ಸಾವನ್ನಪ್ಪಿರಬಹುದು ಎಂದು ತಿಳಿದು ಅಲ್ಲಿಂದ ಪರಾರಿಯಾಗಿದ್ದಾರೆ. ಪ್ರಜ್ಞೆ ಮರುಕಳಿಸಿದ ಬಳಿಕ ಯುವತಿ ಆರ್‌ಪಿಎಫ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ತಂದೆಗೆ ವಿಷಯ ಮುಟ್ಟಿಸಿದಳು. ಈ  ಮಧ್ಯೆ ಸಂತ್ರಸ್ತ ಯುವತಿ ಹಾಗೂ ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿರುವ ತಾಯಿ ಎಂ.ಪಿ.ನಗರ ಠಾಣೆಗೆ ತೆರಳಿ ದೂರು ನೀಡಿದರು. ಪ್ರಸ್ತುತ ಶಂಕಿತ ಆರೋಪಿಗಳನ್ನು ಬಂಧಿಸಲಾಗಿದ್ದು, ಎಲ್ಲರೂ 22 ರಿಂದ 40 ವರ್ಷದವರು  ಎಂದು ತಿಳಿದುಬಂದಿದೆ.
ಇನ್ನು ಗ್ಯಾಂಗ್‌ ರೇಪ್ ಶಿಕ್ಷಿತರಿಗೆ ಮರಣದಂಡನೆ ವಿಧಿಸುವ ಕಾನೂನು ಜಾರಿಗೆ ತರಲು ಮಧ್ಯಪ್ರದೇಶ ಸರ್ಕಾರ ಚಿಂತನೆ ನಡೆಸಿರುವ ನಡುವೆಯೇ ಅದೇ ರಾಜ್ಯದಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣಗಳು ನಡೆದಿದ್ದು, ರಾಜ್ಯದ  ಕಾನೂನು ಸುವ್ಯವಸ್ಥೆಯ ಅಸ್ಥಿತ್ವದ ಬಗ್ಗೆಯೇ ಶಂಕೆ ಮೂಡುವಂತೆ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.