ದೇಶ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: 2 ಭಾರತೀಯ ಯೋಧರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿ ವೇಳೆ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ...

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: 2 ಭಾರತೀಯ ಯೋಧರು ಹುತಾತ್ಮ
ಸಂಗ್ರಹ ಚಿತ್ರ
Published On :
ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿ ವೇಳೆ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. 
ಕಳೆದ ರಾತ್ರಿ ಪುಲ್ವಾಮ ಜಿಲ್ಲೆಯ ಪ್ಯಾಮ್'ಪೋರ್'ನ ಸಂಬೂರ ಗ್ರಾಮದಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರು ದಾಳಿ ನಡೆಸುತ್ತಿದ್ದಂತೆ, ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿವೆ. 
ಈ ವೇಳೆ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆಂದು ವರದಿಗಳು ತಿಳಿಸಿವೆ. 
ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಂತೆಯೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಸೇನಾಪಡೆ ಓರ್ವ ಉಗ್ರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದೆ. ಹತ್ಯೆಯಾದ ಉಗ್ರನನ್ನು ಬದಾರ್ ಎಂದು ಗುರ್ತಿಸಲಾಗಿದ್ದು, ಈತ ಪಾಕಿಸ್ತಾನದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವನಾಗಿದ್ದಾನೆಂದು ಶಂಕಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.