ರಾಜಕೀಯ ಸೇರುವ ಯಾವುದೇ ಯೋಚನೆ ನನಗಿಲ್ಲ: ಹಾರ್ದಿಕ್ ಪಟೇಲ್
ಮುಂದಿನ ಎರಡೂವರೆ ವರ್ಷ ಯಾವುದೇ ರಾಜಕೀಯ ಪಕ್ಷ ಸೇರುವುದಿಲ್ಲ, ಜನರ ಏಜೆಂಟ್ ಆಗಿ ಕೆಲಸ ಮಾಡುತ್ತೇನೆ ಎಂದು ಪಟೀದಾರ್ ಸಮುದಾಯದ ಮೀಸಲಾತಿ ...

Published On :
ಸೂರತ್: ಮುಂದಿನ ಎರಡೂವರೆ ವರ್ಷ ಯಾವುದೇ ರಾಜಕೀಯ ಪಕ್ಷ ಸೇರುವುದಿಲ್ಲ, ಜನರ ಏಜೆಂಟ್ ಆಗಿ ಕೆಲಸ ಮಾಡುತ್ತೇನೆ ಎಂದು ಪಟೀದಾರ್ ಸಮುದಾಯದ ಮೀಸಲಾತಿ ಹೋರಾಟದ ಮುಖಂಡ ಹಾರ್ದಿಕ್ ಪಟೇಲ್ ಸ್ಪಷ್ಟ ಪಡಿಸಿದ್ದಾರೆ.
ನಾನು ಈಗಾಗಲೇ ಹಲವು ಬಾರಿ ಹೇಳಿದ್ದೇನೆ, ರಾಜಕೀಯ ಸೇರುವ ಆಲೋಚನೆ ಸದ್ಯ ನನಗಿಲ್ಲ, ಜನರ ಕಷ್ಟಗಳಿಗೆ ಪರಿಹಾರ ಬೇಕಿದೆ. ಜನರ ಏಜೆಂಟ್ ಆಗಿ ನಾನು ಕೆಲಸ ಮಾಡಲಿದ್ದೇನೆ. ಇನ್ನೂ ಎರಡೂವರೆ ವರ್ಷ ಯಾವುದೇ ರಾಜಕೀಯ ಪಕ್ಷ ಸೇರುವ ಉದ್ದೇಶ ನನಗಿಲ್ಲ ಎಂದು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಜರಾತ್ ನ ಮುಂದಿನ ಭವಿಷ್ಯಕ್ಕಾಗಿ ಹಾಗೂ ಸಮಾಜದ ಒಳಿತಿಗಾಗಿ ಸಂವಿಧಾನಾತ್ಮಕ ಹೋರಾಟ ನಡೆಸುತ್ತೇನೆ ಎಂದು ಹೇಳಿದ್ದಾರೆ.
ಇನ್ನೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೂಡ ಗುಜರಾತ್ ಪ್ರವಾಸದಲ್ಲಿದ್ದಾರೆ, ನಾನು ಇಲ್ಲಿಯೇ ಇದ್ದೇನೆ ಇದೊಂದು ಆಕಸ್ಮಿಕವಷ್ಟೇ ಎಂದು ಹೇಳಿದ್ದಾರೆ. ಪಟೀದಾರ್ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂಬುದು ನಮ್ಮ ಬೇಡಿಕೆ, ನವೆಂಬರ್ 6 ಮತ್ತು 7ರೊಳಗೆ ಇದರ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


