'ಅನ್ನದಾತ' ರೈತರ ಸರ್ವಾಂಗೀಣ ಅಭಿವೃದ್ದಿಗೆ ಕೇಂದ್ರ ಬದ್ಧ: ಪ್ರಧಾನಿ ಮೋದಿ
ಅನ್ನದಾತ ರೈತರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಹೇಳಿದ್ದಾರೆ...

Published On :
ನವದೆಹಲಿ: ಅನ್ನದಾತ ರೈತರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಹೇಳಿದ್ದಾರೆ.
ರಾಜಧಾನಿ ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುತ್ತಿರುವ 'ವರ್ಲ್ಡ್ ಪುಡ್ ಇಂಡಿಯಾ-2017' ಉತ್ಸವವನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿರುವ ಅವರು, ಅನ್ನದಾತ ರೈತರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ವಿಶ್ವ ಆರ್ಥಿಕತೆಯಲ್ಲಿ ಭಾರತ ಪ್ರಬಲವಾಗಿ ಬೆಳೆಯುತ್ತಿದ್ದು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್'ಟಿ) ಬಹುಸಂಖ್ಯೆಯ ತೆರಿಗೆಗಳನ್ನು ತೊಡೆದುಹಾಕಿದೆ ಎಂದು ಹೇಳಿದ್ದಾರೆ.
ಮುಂದಿನ 5 ವರ್ಷಗಳೊಳಗಾಗಿ ರೈತರ ಆದಾಯವನ್ನು ದ್ವಿಗುಣಗೊಳಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದ್ದು, ಕೇಂದ್ರ ಸರ್ಕಾರ ಆಹಾರ ಸಂಸ್ಕರಣೆ ಕುರಿತ ಸರ್ಕಾರ ಶ್ರಮಗಳಿಗೆ ರೈತರ ಪ್ರಮುಖರಾಗಿದ್ದಾರೆ. ಆಹಾರ ಸಂಸ್ಕರಣಾ ಮೂಲಸೌಕರ್ಯಗಳನ್ನು ವಿಶ್ವದರ್ಜೆಗೇರಿಸಲು ಸರ್ಕಾರ ಈಗಾಗಲೇ ಪ್ರಧಾನಮಂತ್ರಿ ಕಿಸಾನ್ ಸಂಪದ ಯೋಜನೆಯನ್ನೂ ಜಾರಿಗೆ ತಂದಿದೆ. ಇದರಿಂದ ಹೂಡಿಕೆಗೆ ಅನುಕೂಲವಾಗಲಿದ್ದು, ರೈತರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಲಾಭವಾಗಲಿದೆ ಮತ್ತು ಮುಂದಿನ 3 ವರ್ಷಗಳಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಲಿದೆ ಎಂದು ತಿಳಿಸಿದ್ದಾರೆ.
ಆಹಾರ ಸಂಸ್ಕರಣೆಯು ಪೌಷ್ಟಿಕಾಂಶ ಭದ್ರತೆಗೆ ಪರಿಹಾರವಾಗಿದ್ದು, ನಮ್ಮಲ್ಲಿರುವ ಧಾನ್ಯಗಳು ಹೆಚ್ಚು ಪೌಷ್ಟಿಕಾಂಶಗಳನ್ನು ಹೊಂದಿದೆ. ಇದು ನಮ್ಮ ರೈತರ ಆದಾಯಗಳನ್ನು ಹೆಚ್ಚಿಸಲಿದೆ. ಆಹಾರ ಸಂಸ್ಕರಣೆಯು ಭಾರತದ ಜೀವನ ವಿಧಾನವಾಗಿದ್ದು, ಧಾನ್ಯಗಳನ್ನು ಸುಲಭ ಹಾಗೂ ಗೃಹ ಆಧಾರಿತ ತಂತ್ರಗಳಿಂದ ತಯಾರು ಮಾಡಲಾಗುತ್ತಿದೆ.
ಆರ್ಥಿಕತೆಯಲ್ಲಿ ಭಾರತ ವಿಶ್ವದಲ್ಲಿಯೇ ಪ್ರಬಲವಾಗಿ ಬೆಳೆಯುತ್ತಿರುವ ದೇಶವಾಗಿದ್ದು, ಸರಕು ಮತ್ತು ಸೇವಾ ತೆರಿಗೆಯಂತಹ ನಿರ್ಧಾರಗಳು ಬಹುಸಂಖ್ಯೆಯ ತೆರಿಗೆಗಳನ್ನು ತೊಡೆದು ಹಾಕುತ್ತಿದೆ.
ವಿಶ್ವ ಬ್ಯಾಂಕ್ ಪ್ರಕಟಿಸಿರುವ ಈಸ್ ಆಫ್ ಡೂಯಿಂಗ್ ಬಿಸಿನೆಸ್ ಸೂಚ್ಯಂಕದಲ್ಲಿ ಭಾರತ 30ಸ್ಥಾನ ಮೇಲಕ್ಕೇರಿ 100ನೇ ಸ್ಥಾನದಲ್ಲಿ ನೆಲೆನಿಂತಿದೆ. 2016ರ ಗ್ರೀನ್'ಫೀಲ್ಡ್ ಹೂಡೆಕೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಇಲ್ಲದೆ, ಜಾಗತಿಕ ಆವಿಷ್ಕಾರಿ ಸೂಚ್ಯಂಕ, ಜಾಗತಿಕ ವ್ಯವಸ್ಥಾಪನಾ ಸೂಚ್ಯಂಕ ಹಾಗೂ ಜಾಗತಿಕ ಸ್ಪರ್ಧಾತ್ಮಕ ಸೂಚ್ಯಂಕದಲ್ಲಿಯೂ ಭಾರತ ಸಾಕಷ್ಟು ಪ್ರಗತಿಯನ್ನು ಕಾಣುತ್ತಿದೆ. ಖಾಸಗಿ ವಲಯಗಳ ಪಾಲ್ಗೊಳ್ಳುವಿಕೆ ಕೂಡ ಹೆಚ್ಚಳವಾಗಿದ್ದು, ಕರಾವಳಿ ಕೃಷಿ ಹಾಗೂ ಕಚ್ಚಾ ವಸ್ತುಗಳ ಸಂಗ್ರಹಣೆ, ಕೃಷಿ ಸಂಪರ್ಕಗಳಿಗೆ ಮತ್ತಷ್ಟು ಹೂಡಿಕೆಯ ಅಗತ್ಯವಿದೆ. ಜಾಗತಿಕ ಕೊಂಡಿಗೆ 'ವರ್ಲ್ಡ್ ಪುಡ್ ಇಂಡಿಯಾ-2017' ಉತ್ಸವ ಉತ್ತಮವಾದ ವೇದಿಕೆಯಾಗಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


