ರೈಲ್ವೆ ಹೋಟೆಲ್ ಗುತ್ತಿಗೆ ಟೆಂಡರ್ ನಲ್ಲಿ ಅಕ್ರಮ: ತೇಜಸ್ವಿ ಯಾದವ್ ಗೆ ಸಮನ್ಸ್
ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ(ಐಆರ್ ಸಿಟಿಸಿ) ಹೊಟೇಲ್ ಗಳ ಗುತ್ತಿಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರ್ ಜೆಡಿ ಮುಖ್ಯಸ್ಥ...

Published On :
ಹೈದರಾಬಾದ್: ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ(ಐಆರ್ ಸಿಟಿಸಿ) ಹೊಟೇಲ್ ಗಳ ಗುತ್ತಿಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.
ನವೆಂಬರ್ 13 ರಂದು ಹಾಜರಾಗುವಂತೆ ಇಡಿ ಸೂಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಕ್ಟೋಬರ್ 31 ರಂದು ಹಾಜರಾಗುವಂತೆ ನೊಟೀಸ್ ನೀಡಿದ್ದರೂ ಬಿಹಾರ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಹಾಜರಾಗಿರಲಿಲ್ಲ, ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಹೊಸದಾಗಿ ಸಮನ್ಸ್ ಜಾರಿ ಮಾಡಿದೆ.
2006ರಲ್ಲಿ ಲಾಲೂ ಪ್ರಸಾದ್ ಯಾದವ್ ರೈಲ್ವೆ ಸಚಿವರಾಗಿದ್ದಾಗ, ಲಂಚ ಸ್ವೀಕರಿಸಿ ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮದ ನಿರ್ವಹಣೆಯ ಗುತ್ತಿಗೆಯನ್ನು ಖಾಸಗಿ ಕಂಪೆನಿಗಳಿಗೆ ನೀಡಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಕೇಸು ದಾಖಲಿಸಿದೆ.
ತೇಜಸ್ವಿ ಯಾದವ್ ತಾಯಿ ರಾಬ್ರಿ ದೇವಿ ಅವರಿಗೆ ನವೆಂಬರ್ 7 ರಂದು ಹಾಜರಾಗುವಂತೆ ಈಗಾಗಲೇ ಇ.ಡಿ ಸಮನ್ಸ್ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Enforcement Directorateಜಾರಿ ನಿರ್ದೇಶನಾಲಯಸಮನ್ಸ್summonsತೇಜಸ್ವಿ ಯಾದವ್Tejashwi Yadavrailway hotel corruption caseರೈಲ್ವೆ ಹೋಟೆಲ್ ಅಕ್ರಮ ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


