ದೂರಶಿಕ್ಷಣದ ಮುಖೇನ ಪಡೆದ ತಾಂತ್ರಿಕ ವಿದ್ಯಾಭ್ಯಾಸಕ್ಕೆ ಮಾನ್ಯತೆ ಇಲ್ಲ, ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ದೂರಶಿಕ್ಷಣ ಕೋರ್ಸುಗಳ ಮೂಲಕ ತಾಂತ್ರಿಕ ಶಿಕ್ಷಣವನ್ನು ನೀದಬಾರದು ಎಂದು ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಿತು.

Published On :
ನವದೆಹಲಿ: ದೂರಶಿಕ್ಷಣ ಕೋರ್ಸುಗಳ ಮೂಲಕ ತಾಂತ್ರಿಕ ಶಿಕ್ಷಣವನ್ನು ನೀದಬಾರದು ಎಂದು ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಿತು. ಈ ವಿಷಯದಲ್ಲಿ ಪಂಜಾಬ್ ಮತ್ತು ಹರಿಯಾಣ ಹೈ ಕೋರ್ಟ್ ಗಳು ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್ ಉಲ್ಲೇಖಿಸಿದ್ದು, ದೂರ ಶಿಕ್ಷಣದ ಮೂಲಕ ತಾಂತ್ರಿಕ ಪದವಿ ನೀಡಬಾರದೆಂದು ಎಂಬ ಅಭಿಪ್ರಾಯಕ್ಕೆ ಬಂದಿದೆ.
ಅಂಚೆ ಮುಖೇನ ತಾಂತ್ರಿಕ ಶಿಕ್ಷಣ ನೀಡಲು ಅನುವು ಮಾಡಿಕೊಟ್ಟಿದ್ದ ಒಡಿಶಾ ಹೈ ಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ.
ದೂರ ಶಿಕ್ಷಣದ ಮೂಲಕ ಪಡೆದ ಕಂಪ್ಯೂಟರ್ ಪದವಿ ಯನ್ನು ನಿಯತವಾಗಿ ತರಗತಿಗೆ ಹಾಜರಾಗಿ ಪಡೆದ ಪದವಿಯೊಡನೆ ಪರಿಗಣಿಸಲು ಬರುವುದಿಲ್ಲ ಎಂದು ಪಂಜಾಬ್ ಮತ್ತು ಹರಿಯಾಣ ಹೈ ಕೋರ್ಟ್ ಗಳು ಎರಡು ವರ್ಷಗಳ ಹಿಂದೆ ತೀರ್ಪು ಪ್ರಕಟಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್Haryana High Courtಪಂಜಾಬ್ ಹೈಕೋರ್ಟ್distance educationದೂರ ಶಿಕ್ಷಣtechnical educationPunjab High Courtತಾಂತ್ರಿಕ ಶಿಕ್ಷಣಹರಿಯಾಣ ಹೈಕೋರ್ಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


