ದೋವಲ್ ಪುತ್ರನ ವಿರುದ್ಧ ವರದಿ; 4 ಸಚಿವರನ್ನು ಕಿತ್ತೊಗೆಯಿರಿ: ಮೋದಿಗೆ ಕಾಂಗ್ರೆಸ್ ಆಗ್ರಹ
ಭಾರತೀಯ ಜನತಾಪಕ್ಷ(ಬಿಜೆಪಿ) ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪುತ್ರ ಜಯ್ ಅಮಿತ್ ಶಾ ಅವರ ಕಂಪೆನಿಯಲ್ಲಿ ಅಕ್ರಮ ವ್ಯವಹಾರ ನಡೆಸಿದೆ ಎಂದು ಸುದ್ದಿ ಪ್ರಕಟಿಸಿದ್ದ...

Published On :
ನವದೆಹಲಿ: ಭಾರತೀಯ ಜನತಾಪಕ್ಷ(ಬಿಜೆಪಿ) ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪುತ್ರ ಜಯ್ ಅಮಿತ್ ಶಾ ಅವರ ಕಂಪೆನಿಯಲ್ಲಿ ಅಕ್ರಮ ವ್ಯವಹಾರ ನಡೆಸಿದೆ ಎಂದು ಸುದ್ದಿ ಪ್ರಕಟಿಸಿದ್ದ ದಿ ವೈರ್ ಇದೀಗ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿರುವ ಅಜಿತ್ ದೋವಲ್ ಪುತ್ರ ಶೌರ್ಯ ದೋವಲ್ ನಿರ್ದೇಶಕರಾಗಿರುವ ಸಂಸ್ಥೆಗೆ ವಿದೇಶಿ ಮೂಲಗಳಿಂದ ಆರ್ಥಿಕ ಸಹಾಯ ಲಭಿಸುತ್ತಿದೆ ಎಂಬ ಸುದ್ದಿಯೊಂದನ್ನು ಪ್ರಕಟಿಸಿದೆ.
ಇದೇ ವರದಿಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಇದೀಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ವಿರುದ್ಧ ಕಿಡಿಕಾರಿದೆ. ಶೌರ್ಯ ದೋವಲ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಂ ಮಾಧವ್ ಜತೆಯಾಗಿ ನಿರ್ವಹಿಸುತ್ತಿರುವ ಇಂಡಿಯಾ ಫೌಂಡೇಶನ್ ನಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಸುರೇಶ್ ಪ್ರಭು, ಜಯಂತ್ ಸಿನ್ಹಾ ಮತ್ತು ಎಂಜೆ ಅಕ್ಬರ್ ಸಹ ನಿರ್ದೇಶಕರಾಗಿದ್ದು ಇವರನ್ನು ವಜಾ ಮಾಡುವಂತೆ ಕಾಂಗ್ರೆಸ್ ಆಗ್ರಹಿಸಿದೆ.
ಈ ನಾಲ್ವರು ಕೇಂದ್ರ ಸಚಿವರನ್ನು ಸಂಪುಟದಿಂದ ವಜಾ ಮಾಡುವಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿದ್ದು ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ(ಸಿಬಿಐ) ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಇಂಡಿಯಾ ಫೌಂಡೇಶನ್ ದೇಶದ ರಕ್ಷಣೆ ಮತ್ತು ಆರ್ಥಿಕ ಕ್ಷೇತ್ರದಲ್ಲಿ ನೀತಿ ನಿರೂಪಣೆಗೆ ಸಂಬಂಧಪಟ್ಟ ಚರ್ಚೆ ಮತ್ತು ಸೆಮಿನಾರ್ ಗಳನ್ನು ಆಯೋಜಿಸುವ ಚಿಂತಕರ ಚಾವಡಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿCongressಕಾಂಗ್ರೆಸ್Rahul Gandhiರಾಹುಲ್ ಗಾಂಧಿAjit Dovalಅಜಿತ್ ದೋವಲ್Shaurya Dovalಶೌರ್ಯ ದೋವಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


