ಜಮ್ಮು-ಕಾಶ್ಮೀರವನ್ನು ಬದಲಾಯಿಸುವ ಮೂಲಕ ಮೋದಿ ಇತಿಹಾಸ ನಿರ್ಮಿಸಬಲ್ಲರು: ಮೆಹಬೂಬಾ ಮುಫ್ತಿ
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವ ಆರ್ಟಿಕಲ್ 370 ಹಾಗೆಯೇ ಉಳಿಯಬೇಕು ಎಂದು ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

Published On :
ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವ ಆರ್ಟಿಕಲ್ 370 ಹಾಗೆಯೇ ಉಳಿಯಬೇಕು ಎಂದು ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ ಹೇಳಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ, ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರದ ಬಗ್ಗೆ ಇರುವ ಅನಿಸಿಕೆ, ಅಭಿಪ್ರಾಯಗಳನ್ನು ಬದಲಾವಣೆ ಮಾಡುವ ಮೂಲಕ ಇತಿಹಾಸ ನಿರ್ಮಿಸಬಲ್ಲರು ಎಂದು ಮೆಹಬೂಬಾ ಮುಫ್ತಿ ಅಭಿಪ್ರಾಯಪಟ್ಟಿದ್ದಾರೆ.
ಪ್ರಜಾಪ್ರಭುತ್ವವೆಂದರೆ ವಿಚಾರಧಾರೆಗಳ ಸಂಘರ್ಷ, ಮಾತುಕತೆಯೊಂದರಿಂದಲೇ ಮುನ್ನಡೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭೂತಪೂರ್ವ ಜನಮನ್ನಣೆ ಇದ್ದು, ಜಮ್ಮು-ಕಾಶ್ಮೀರವನ್ನು ಬದಲಾವಣೆ ಮಾಡುವ ಮೂಲಕ ಹೊಸ ಇತಿಹಾಸ ನಿರ್ಮಿಸಬಹುದು ಎಂದು ಹೇಳಿದ್ದಾರೆ.
ಬಿಜೆಪಿ ನಾಯಕರು ಆರ್ಟಿಕಲ್ 370 ನ್ನು ರದ್ದುಗೊಳಿಸುವಂತೆ ಒತ್ತಡ ಹೇರುತ್ತಿರುವ ಬೆನ್ನಲ್ಲೇ ಮೆಹಬೂಬಾ ಮುಫ್ತಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನರೇಂದ್ರ ಮೋದಿPM ModiJammu and Kashmirಜಮ್ಮು-ಕಾಶ್ಮೀರArticle 370Mehbooba Muftiಮೆಹಬೂಬಾ ಮುಫ್ತಿಆರ್ಟಿಕಲ್ 370
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


