ಮುಂಬೈನಲ್ಲಿ ಶಂಕಿತ ಇಸಿಸ್ ಭಯೋತ್ಪಾದಕನ ಬಂಧನ!
ಮಹತ್ವದ ಕಾರ್ಯಾಚರಣೆಯಲ್ಲಿ ಮುಂಬೈನಲ್ಲಿ ಶಂಕಿತ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಭಯೋತ್ಪಾದಕನನ್ನು ಭಯೋತ್ಪಾದಕ ನಿಗ್ರಹ ದಳ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.

Published On :
ಮುಂಬೈ: ಮಹತ್ವದ ಕಾರ್ಯಾಚರಣೆಯಲ್ಲಿ ಮುಂಬೈನಲ್ಲಿ ಶಂಕಿತ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಭಯೋತ್ಪಾದಕನನ್ನು ಭಯೋತ್ಪಾದಕ ನಿಗ್ರಹ ದಳ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.
ಮೂಲಗಳ ಪ್ರಕಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರ ಅಬು ಜೈದ್ ಎಂಬಾತನನ್ನು ಬಂಧಿಸಲಾಗಿದ್ದು, ಪಶ್ಚಿಮ ಉತ್ತರ ಪ್ರದೇಶದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಜಾಲವನ್ನು ಈತ ಹೊಂದಿದ್ದು ಎಂದು ಹೇಳಲಾಗಿದೆ. ಪೊಲೀಸರು ತಿಳಿಸಿರುವಂತೆ ದುಬೈನಲ್ಲಿ ನೆಲೆಸಿರುವ ಈತ ಮುಂಬೈಗೆ ಆಗಮಿಸಿದಾಗ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಹಿಂದೆಯೂ ಕೂಡ ಸಾಕಷ್ಟು ಬಾರಿ ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ಬಂಧನಕ್ಕೀಡಾಗಿದ್ದ ಶಂಕಿತ ಉಗ್ರರಿಂದ ಈತನ ಹೆಸರು ಪದೇ ಪದೇ ಕೇಳಿಬರುತ್ತಿತ್ತು. ಹೀಗಾಗಿ ಈತನ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದ ಉತ್ತರ ಪ್ರದೇಶ ಎಟಿಎಸ್ ಅಧಿಕಾರಿಗಳು ಈತ ಭಾರತಕ್ಕೆ ಬರುವ ಕುರಿತು ಖಚಿತ ಮಾಹಿತಿ ಪಡೆದು ಇಂದು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಕಳೆದ ವಾರವಷ್ಟೇ ಕೇರಳದ ಕಣ್ಣೂರಿನಲ್ಲಿ 5 ಮಂದಿ ಶಂಕಿತ ಇಸಿಸ್ ಉಗ್ರರನ್ನು ಬಂಧಿಸಲಾಗಿತ್ತು. ಈ ವೇಳೆ ಎಲ್ಲರೂ ಸಿರಿಯಾಗೆ ತೆರಳಿ ಅಲ್ಲಿ ಇಸಿಸ್ ಪರ ಹೋರಾಡಲು ನಿರ್ಧರಿಸಿದ್ದರು ಎಂದು ಹೇಳಲಾಗುತ್ತಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MumbaiಮುಂಬೈUttar pradeshಉತ್ತರ ಪ್ರದೇಶಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆIslamic State terror groupಭಯೋತ್ಪಾದಕ ನಿಗ್ರಹ ದಳAnti Terrorist Squad
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


