ಕೇರಳ: ಮಲೆಯಾಳಂ ಸುದ್ದಿ ವಾಹಿನಿಯ ವರದಿಗಾರ ಆತ್ಮಹತ್ಯೆಗೆ ಶರಣು
ಮಲೆಯಾಳಂ ಸುದ್ದಿ ವಾಹಿನಿಯ 26 ವರ್ಷದ ವರದಿಗಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ....

Published On :
ಕೋಜಿಕೋಡ್: ಮಲೆಯಾಳಂ ಸುದ್ದಿ ವಾಹಿನಿಯ 26 ವರ್ಷದ ವರದಿಗಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ಶರಣಾದ ವರದಿಗಾರ ಕೊಚ್ಚಿ ಜಿಲ್ಲೆಯ ತೊಂಪುಬಡಿಯ ನಿತೀನ್ ದಾಸ್ ಎಂದು ಗುರುತಿಸಲಾಗಿದ್ದು, ನಿನ್ನೆ ರಾತ್ರಿ ಅಪಾರ್ಟ್ ಮೆಂಟ್ ನ ತನ್ನ ಕೊಣೆಯಲ್ಲಿ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನೆರೆಯವರು ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ನೆರೆಯವರಿಂದ ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ದಾಸ್ ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಪೊಲೀಸರು ಐಪಿಸಿ ಸೆಕ್ಷನ್ 174(ಅಸಹಜ ಸಾವು) ಅಡಿ ಕೇಸ್ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


