ದೇಶ

ನೋಟು ನಿಷೇಧಕ್ಕೆ 1 ವರ್ಷ; ಡಿಎಂಕೆ ಹಮ್ಮಿಕೊಂಡಿದ್ದ ಪ್ರತಿಭಟನಾ ಕಾರ್ಯಕ್ರಮಗಳು ರದ್ದು!

ಕೇಂದ್ರ ಸರ್ಕಾರದ ನೋಟು ನಿಷೇಧ ಜಾರಿಗೆ ಒಂದು ವರ್ಷ ತುಂಬುತ್ತಿರುವ ಹಿನ್ನಲೆಯಲ್ಲಿ ಡಿಎಂಕೆ ಪಕ್ಷ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಕಾರಣಾಂತರಗಳಿಂದ ಕೈಬಿಟ್ಟಿದೆ ಎನ್ನಲಾಗಿದೆ.

ನೋಟು ನಿಷೇಧಕ್ಕೆ 1 ವರ್ಷ; ಡಿಎಂಕೆ ಹಮ್ಮಿಕೊಂಡಿದ್ದ ಪ್ರತಿಭಟನಾ ಕಾರ್ಯಕ್ರಮಗಳು ರದ್ದು!
ಸಂಗ್ರಹ ಚಿತ್ರ
Published On :
ಚೆನ್ನೈ: ಕೇಂದ್ರ ಸರ್ಕಾರದ ನೋಟು ನಿಷೇಧ ಜಾರಿಗೆ ಒಂದು ವರ್ಷ ತುಂಬುತ್ತಿರುವ ಹಿನ್ನಲೆಯಲ್ಲಿ ಡಿಎಂಕೆ ಪಕ್ಷ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಕಾರಣಾಂತರಗಳಿಂದ ಕೈಬಿಟ್ಟಿದೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಎಂಕೆ ಸ್ಟಾಲಿನ್ ನೇತೃತ್ವದಲ್ಲಿ ತಮಿಳುನಾಡಿನ 8 ಜಿಲ್ಲೆಗಳಲ್ಲಿ ಡಿಎಂಕೆ ಪಕ್ಷ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ನಡೆಸಲು ಮುಂದಾಗಿತ್ತು. ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ನಾಗಪಟ್ಟಣಂ, ಕಡಲೂರು,  ತಿರುವರೂರು, ತಿರುವಣ್ಣಾಮಲೈ ಮತ್ತು ವೆಲ್ಲೂರ್ ನಲ್ಲಿ ಡಿಎಂಕೆ ಬೃಹತ್ ಪ್ರತಿಭಟನಾ ರ್ಯಾಲಿಗೆ ಸಿದ್ಧತೆ ನಡೆಸಿಕೊಂಡಿತ್ತು. ಆದರೆ ಕಳೆದೊಂದು ವಾರದಿಂದ ಸುರಿದ ಮಳೆಯಿಂದಾಗಿ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ  ನಿರ್ಮಾಣವಾಗಿದ್ದು, ಇದೇ ಕಾರಣಕ್ಕೆ ಡಿಎಂಕೆ ಮುಖಂಡರು ಕಾರ್ಯಕ್ರಮವನ್ನು ರದ್ದು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಹಿಂದೆ ಘೋಷಣೆ ಮಾಡಿದ್ದಂತೆ ಕಾಂಗ್ರೆಸ್ ಮೈತ್ರೀಕೂಟದ ಪ್ರಮುಖ ಪಕ್ಷ ಕೂಡ ಆಗಿರುವ ಡಿಎಂಕೆ ನೋಟು ನಿಷೇಧ ಜಾರಿಯಾದ ನವೆಂಬರ್ 8ನ್ನು ಕರಾಳ ದಿನವನ್ನಾಗಿ ಆಚರಣೆ ಮಾಡಲು ನಿರ್ಧರಿಸಿದ್ದು. ಇದಕ್ಕಾಗಿ  ತಮಿಳುನಾಡಿನ 8 ಜಿಲ್ಲೆಗಳಲ್ಲಿ ಕಾರ್ಯಕರ್ತರೊಂದಿಗೆ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಆಯೋಜಿಸಲು ಸಿದ್ಧತೆ ನಡೆಸಿತ್ತು.
ಅಚ್ಚರಿ ಮೂಡಿಸಿದ ಡಿಎಂಕೆ ನಡೆ
ಇನ್ನು ಡಿಎಂಕೆ ಪಕ್ಷದ ಈ ದಿಢೀರ್ ನಿರ್ಧಾರ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದು, ನಿನ್ನೆಯಷ್ಟೇ ಚೆನ್ನೈಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಕರುಣಾನಿಧಿ ಅವರ ಮನೆಗೆ ಆಗಮಿಸಿ ಅವರ ಆರೋಗ್ಯ ವಿಚಾರಿಸಿದ್ದರು.  ಬಹುಶಃ ಡಿಎಂಕೆ ಇದರಿಂದ ಬಿಜೆಪಿ ಕುರಿತಂತೆ ಮೃದು ಧೋರಣೆ ತಳೆದಿದೆಯೇ ಎಂಬ ಅನುಮಾನ ಕೂಡ ಕಾಡಿತ್ತು. ಇದಕ್ಕೆ ಸ್ಪಷ್ಟನೆ ಕೂಡ ನೀಡಿರುವ ಡಿಎಂಕೆ ಮಳೆಯಿಂದಾಗಿ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆಯ ಮಳೆ  ನೀರಿನ ನಡುವೆಯೂ ಕಾರ್ಯಕ್ರಮ ಆಯೋಜಿಸುವುದರಿಂದ ಕಾರ್ಯಕರ್ತರಿಗೆ ತೊಂದರೆಯಾಗಲಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.