ಕಾಶ್ಮೀರದಲ್ಲಿ ಸುಮಾರ 36.5 ಕೋಟಿ ರು. ಮೌಲ್ಯದ ನಿಷೇಧಿತ ನೋಟ್ ಜಪ್ತಿ: ಎನ್ಐಎ
ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಹಣಕಾಸು ನೆರವು ಪ್ರಕರಣದ ತನಿಖೆಯ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸುಮಾರು 36.5 ಕೋಟಿ....

Published On :
ನವದೆಹಲಿ: ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಹಣಕಾಸು ನೆರವು ಪ್ರಕರಣದ ತನಿಖೆಯ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸುಮಾರು 36.5 ಕೋಟಿ ರುಪಾಯಿ ಮೌಲ್ಯದ ನಿಷೇಧಿತ ನೋಟ್ ಗಳನ್ನು ಜಪ್ತಿ ಮಾಡಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಮಂಗಳವಾರ ಹೇಳಿದೆ.
ಭಯೋತ್ಪಾದನೆಗೆ ಹಣಕಾಸು ನೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು 36,34,78,500 ರುಪಾಯಿ ಮೌಲ್ಯದ ನಿಷೇಧಿತ ನೋಟ್ ಗಳನ್ನು ಜಪ್ತಿ ಮಾಡಿದ್ದೇವೆ ಮತ್ತು ಒಂಬತ್ತು ಮಂದಿಯನ್ನು ಬಂಧಿಸಿದ್ದೇವೆ ಎಂದು ಎನ್ಐಎ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷ ನವೆಂಬರ್ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು 500 ಹಾಗೂ 1000 ರುಪಾಯಿ ಮುಖಬೆಲೆಯ ನೋಟ್ ಗಳನ್ನು ನಿಷೇಧಿಸಿದ ನಂತರವೂ ಗಡಿ ಭಯೋತ್ಪಾದನೆ ಮೇಲೆ ಮತ್ತು ಹಣಕಾಸು ನೆರವಿನ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಕಾಂಗ್ರೆಸ್ ಆರೋಪದ ಬೆನ್ನಲ್ಲೇ ಎನ್ಐಎ ಈ ಹೇಳಿಕೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


