ದೇಶ

ಶಾಲಾ ವಿದ್ಯಾರ್ಥಿಗಳ ಮೇಲೆ ಹರಿದ ಟ್ರಕ್: 9 ವಿದ್ಯಾರ್ಥಿಗಳ ದಾರುಣ ಸಾವು

ದಟ್ಟವಾಗಿ ಮಂಜು ಕವಿದಿದ್ದರಿಂದ ರಸ್ತೆ ಕಾಣದೆ ಟ್ರಕ್ ಚಾಲಕನೊಬ್ಬ ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಟ್ರಕ್ ಹರಿಸಿದ್ದು ಪರಿಣಾಮ 9 ವಿದ್ಯಾರ್ಥಿಗಳು ದಾರುಣ...

ಶಾಲಾ ವಿದ್ಯಾರ್ಥಿಗಳ ಮೇಲೆ ಹರಿದ ಟ್ರಕ್: 9 ವಿದ್ಯಾರ್ಥಿಗಳ ದಾರುಣ ಸಾವು
ಅಪಘಾತ
Published On :
ಚಂಢಿಗಡ್: ದಟ್ಟವಾಗಿ ಮಂಜು ಕವಿದಿದ್ದರಿಂದ ರಸ್ತೆ ಕಾಣದೆ ಟ್ರಕ್ ಚಾಲಕನೊಬ್ಬ ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಟ್ರಕ್ ಹರಿಸಿದ್ದು ಪರಿಣಾಮ 9 ವಿದ್ಯಾರ್ಥಿಗಳು ದಾರುಣ ಸಾವನ್ನಪ್ಪಿರುವ ದಾರುಣ ಘಟನೆ ಪಂಜಾಬ್ ನ ಬತಿಂಡಾ ಜಿಲ್ಲೆಯಲ್ಲಿ ನಡೆದಿದೆ. 
ಬತಿಂಡಾ-ಬರ್ನಾಲಾ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ದಟ್ಟ ಮಂಜು ಆವರಿಸಿದ್ದರಿಂದ ರಸ್ತೆ ಬದಿಯಲ್ಲಿ ವಿದ್ಯಾರ್ಥಿಗಳ ನಿಂತಿರುವುದನ್ನು ಗಮನಿಸುವಲ್ಲಿ ಟ್ರಕ್ ಚಾಲಕ ವಿಫಲರಾಗಿದ್ದು ಅಪಘಾತಕ್ಕೆ ಕಾರಣವಾಗಿದೆ. 
ಭೀಕರ ಅಪಘಾತದಲ್ಲಿ ಒಂಬತ್ತು ವಿದ್ಯಾರ್ಥಿ ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನು ಏಳು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.