ಪ್ರದ್ಯುಮನ್ ಹತ್ಯೆ ಪ್ರಕರಣ: ಪರೀಕ್ಷೆ ಮುಂದೂಡಲು ಹತ್ಯೆ ಮಾಡಿದ್ದಾಗಿ ಪ್ರಥಮ ಪಿಯು ವಿದ್ಯಾರ್ಥಿ ತಪ್ಪೊಪ್ಪಿಗೆ- ಸಿಬಿಐ
ಗುರುಗ್ರಾಮದ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ 2ನೇ ತರಗತಿಯ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ.08 ರಂದು ಶಾಲೆಯ ಪ್ರಥಮ ಪಿಯು ವಿದ್ಯಾರ್ಥಿಯನ್ನು ಕೊಲೆ ಆರೋಪದಡಿ

Published On :
ನವದೆಹಲಿ: ಗುರುಗ್ರಾಮದ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ 2ನೇ ತರಗತಿಯ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ.08 ರಂದು ಶಾಲೆಯ ಪ್ರಥಮ ಪಿಯು ವಿದ್ಯಾರ್ಥಿಯನ್ನು ಕೊಲೆ ಆರೋಪದಡಿ ಬಂಧಿಸಿದ್ದು, ಬಾಲ ನ್ಯಾಯಮಂಡಳಿ ಎದುರು ಹಾಜರುಪಡಿಸಲಿದೆ.
ಪರೀಕ್ಷೆ ಹಾಗೂ ಪೋಷಕರು-ಶಿಕ್ಷಕರ ಸಭೆಯನ್ನು ಮುಂದೂಡಲು ಸಹಕಾರಿಯಾಗುತ್ತದೆ ಎಂಬ ದುರಾಲೋಚನೆಯಿಂದ ಪ್ರದ್ಯುಮನ್ ಎಂಬ ವಿದ್ಯಾರ್ಥಿಯನ್ನು ಕೊಲೆ ಮಾಡಿರುವುದಾಗಿ ಪ್ರಥಮ ಪಿಯು ವಿದ್ಯಾರ್ಥಿ ಒಪ್ಪಿಕೊಂಡಿದ್ದಾನೆ ಎಂದು ಸಿಬಿಐ ಮಾಹಿತಿ ನೀಡಿದೆ.
ಕೊಲೆ ಆರೋಪದಡಿ ಮಗನ ಬಂಧನವನ್ನು ತಂದೆ ಖಚಿತಪಡಿಸಿದ್ದಾರೆ, ಆದರೆ ಬಂಧಿತ ಆರೋಪಿ ಬಾಲಾಪರಾಧಿಯಾಗಿರುವುದರಿಂದ ಸಿಬಿಐ ಈ ವರೆಗೂ ಅಧಿಕೃತ ಹೇಳಿಕೆ ನೀಡಿಲ್ಲ.
ವಿದ್ಯಾರ್ಥಿಯ ಬಂಧನವಾಗಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆತನ ತಂದೆ, ನನ್ನ ಮಗ ಅಪರಾಧ ಮಾಡಿಲ್ಲ, ಶೌಚಾಲಯದಲ್ಲಿ ವಿದ್ಯಾರ್ಥಿಯ ಮೃತದೇಹ ಇರುವುದನ್ನು ಶಿಕ್ಷಕರಿಗೆ ತಿಳಿಸಿದ್ದ ಎಂದು ಹೇಳಿದ್ದಾರೆ. ಸೆಪ್ಟೆಂಬರ್ 8ರಂದು 7 ವರ್ಷ ವಿದ್ಯಾರ್ಥಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು, ವಿದ್ಯಾರ್ಥಿಯ ಶವ ಶಾಲಾ ಶೌಚಾಲಯದಲ್ಲಿ ಪತ್ತೆಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CBIGurugramಗುರುಗ್ರಾಮStudent MurderRyan International Schoolವಿದ್ಯಾರ್ಥಿ ಹತ್ಯೆರ್ಯಾನ್ ಇಂಟರ್ ನ್ಯಾಷನಲ್ ಶಾಲೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


