ದೇಶ

ನೋಟು ನಿಷೇಧಕ್ಕೆ 1 ವರ್ಷ: ಜನತೆಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ

ನರೇಂದ್ರ ಮೋದಿ ಸರ್ಕಾರ 500 ಹಾಗೂ 1ಸಾವಿರ ರು. ಮುಖ ಬೆಲೆಯ ನೋಟುಗಳ ಅಮಾನ್ಯೀಕರಣ ಗೊಳಿಸಿ 1 ವರ್ಷ ತುಂಬಿದ ಹಿನ್ನೆಲೆಯಲ್ಲಿ ಪ್ರದಾನಿ ದೇಶದ ...

ನೋಟು ನಿಷೇಧಕ್ಕೆ 1 ವರ್ಷ: ಜನತೆಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
Published On :
ನವದೆಹಲಿ:  ನರೇಂದ್ರ ಮೋದಿ ಸರ್ಕಾರ 500 ಹಾಗೂ 1ಸಾವಿರ ರು. ಮುಖ ಬೆಲೆಯ ನೋಟುಗಳ ಅಮಾನ್ಯೀಕರಣ ಗೊಳಿಸಿ 1 ವರ್ಷ ತುಂಬಿದ ಹಿನ್ನೆಲೆಯಲ್ಲಿ ಪ್ರದಾನಿ ದೇಶದ ಜನತೆಗೆ ಧನ್ಯವಾದ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ದೇಶದ ನಿರ್ಣಾಯಕ ಯುದ್ಧದಲ್ಲಿ 125 ಕೋಟಿ ಭಾರತೀಯರು ಹೋರಾಡಿ ಗೆದ್ದಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಇದೊಂದು ಐತಿಹಾಸಿಕ ಯಶಸ್ಸು ಎಂದು ನರೇಂದ್ರ ಮೋದಿ ಬಣ್ಣಿಸಿದ್ದಾರೆ. 
ಭ್ರಷ್ಟಾಚಾರ  ನಿರ್ಮೂಲನೆ ಮತ್ತು ಕಪ್ಪುಹಣ ವಿರುದ್ಧ ಸರ್ಕಾರದ ಹೋರಾಟಕ್ಕೆ ಬೆಂಬಲ ನೀಡಿದ ಎಲ್ಲಾ ಭಾರತೀಯರಿಗೆ ತಲೆಬಾಗಿ ಧನ್ಯವಾದ ಹೇಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ನವೆಂಬರ್ 8 2016 ರಂದು ಪ್ರಧಾನಿ ನರೇಂದ್ರ ಮೋದಿ 500 ಹಾಗೂ ಸಾವಿರ ರು ನೋಟುಗಳನ್ನು ನಿಷೇಧಿಸಿ ರಾತ್ರೋರಾತ್ರಿ ಆದೇಶ ಹೊರಡಿಸಿದ್ದರು. ಭ್ರಷ್ಟಾಚಾರ ಮತ್ತು ಕಪ್ಪು ಹಣದ ವಿರುದ್ಧದ ನಿರ್ಣಾಯಕ ಯುದ್ಧ ಎಂದು ಇದನ್ನು ಕರೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.