ದೇಶ

ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ: ಬೆಳಗ್ಗೆ 10 ವೇಳೆಗೆ ಶೇ.13.62ರಷ್ಟು ಮತದಾನ

ಪರ್ವತ ರಾಜ್ಯ ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಮುಂದುವರಿದಿದ್ದು...

ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ: ಬೆಳಗ್ಗೆ 10 ವೇಳೆಗೆ ಶೇ.13.62ರಷ್ಟು ಮತದಾನ
ಮುಖ್ಯಮಂತ್ರಿ ವೀರಭದ್ರ ಸಿಂಗ್ ಮತ್ತು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಪ್ರೇಮ್ ಕುಮಾರ್ ದ್ಹುಮಲ್
Published On :
ಶಿಮ್ಲಾ: ಪರ್ವತ ರಾಜ್ಯ ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಮುಂದುವರಿದಿದ್ದು, ಬೆಳಗ್ಗೆ 10 ಗಂಟೆಯ ಹೊತ್ತಿಗೆ ಶೇಕಡಾ 13.62ರಷ್ಟು ಮತದಾನವಾಗಿದೆ.
ಮುಖ್ಯಮಂತ್ರಿ ವೀರಭದ್ರ ಸಿಂಗ್, 10 ಮಂದಿ ಸಚಿವರು, ಎಂಟು ಮುಖ್ಯ ಸಂಸದೀಯ ಕಾರ್ಯದರ್ಶಿಗಳು, ಉಪ ಸ್ಪೀಕರ್ ಜಗತ್ ಸಿಂಗ್, ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಪ್ರೇಮ್ ಕುಮಾರ್ ದ್ಹುಮಲ್ ಹಾಗೂ ಇನ್ನೂ ಅನೇಕ ಪ್ರಮುಖರು ಬೆಳಗ್ಗೆಯೇ ತಮ್ಮ ಹಕ್ಕು ಚಲಾಯಿಸಿದರು.
ಈ ಬಾರಿಯ ಚುನಾವಣೆಯಲ್ಲಿ 62 ಮಂದಿ ಶಾಸಕರು ಸೇರಿದಂತೆ 337 ಅಭ್ಯರ್ಥಿಗಳು ಸ್ಪರ್ಧಾಕಣದಲ್ಲಿದ್ದಾರೆ. ಡೂನ್ ವಿಧಾನಸಭಾ ಕ್ಷೇತ್ರದಲ್ಲಿ 9 ಮತಯಂತ್ರಗಳು ಕೆಟ್ಟು ಹೋದ ಬಗ್ಗೆ ವರದಿಯಾಗಿದೆ. ಕೆಲವು ಕಡೆ ವಿದ್ಯುನ್ಮಾನ ಮತಯಂತ್ರಗಳು ಕೈ ಕೊಟ್ಟಿರುವ ಬಗ್ಗೆ ಕೂಡ ವರದಿಯಾಗಿದೆ. 
ಶಿಮ್ಲಾದಲ್ಲಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ತಮ್ಮ ಕುಟುಂಬದವರ ಜೊತೆ ಮತ ಚಲಾಯಿಸಿದರು. ಕಾಂಗ್ರೆಸ್ ಪಕ್ಷ ಬಹುಮತದಿಂದ ಗೆಲುವು ಸಾಧಿಸಲಿದೆ ಎಂದು ವೀರಭದ್ರ ಸಿಂಗ್ ವಿಶ್ವಾಸ ನುಡಿದಿದ್ದಾರೆ. 
ಬಿಜೆಪಿ ಸಿಎಂ ಅಭ್ಯರ್ಥಿ ಪ್ರೇಮ್ ಕುಮಾರ್ ದುಮಲ್ ತಮ್ಮ ಕುಟುಂಬದವರ ಜೊತೆ ಸಮಿರ್ಪುರ್ ಕ್ಷೇತ್ರದಲ್ಲಿ ಹಕ್ಕು ಚಲಾಯಿಸಿದರು.
101 ವರ್ಷದ ಕಲ್ಪಿ ಮತ್ತು ಶತಾಯುಷಿ ಶ್ಯಾಮ್ ಶರಣ್ ನೆಗಿ ಕನ್ನೌರ್ ಮಾಂಜು ಕ್ಷೇತ್ರದಲ್ಲಿ ಮತದಾನ ಮಾಡಿ ಜನರ ಗಮನ ಸೆಳೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.