ಜಮ್ಮು ಮತ್ತು ಕಾಶ್ಮೀರ: ಉಗ್ರರ ವಿರುದ್ಧ ಭಾರೀ ಕಾರ್ಯಾಚರಣೆಗಿಳಿದ ಸೇನಾಪಡೆ
ಉಗ್ರರು ಅಡಗಿಕುಳಿತಿರುವುದಾಗಿ ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ 12ಕ್ಕೂ ಹೆಚ್ಚು ಗ್ರಾಮಗಳಲ್ಲಿ ಭಾರತೀಯ ಸೇನೆಪಡೆ ಭಾರೀ ಕಾರ್ಯಾಚರಣೆಯನ್ನು ನಡೆಸುತ್ತಿದೆ ಎಂದು ಗುರುವಾರ ತಿಳಿದುಬಂದಿದೆ...

Published On :
ಶ್ರೀನಗರ: ಉಗ್ರರು ಅಡಗಿಕುಳಿತಿರುವುದಾಗಿ ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ 12ಕ್ಕೂ ಹೆಚ್ಚು ಗ್ರಾಮಗಳಲ್ಲಿ ಭಾರತೀಯ ಸೇನೆಪಡೆ ಭಾರೀ ಕಾರ್ಯಾಚರಣೆಯನ್ನು ನಡೆಸುತ್ತಿದೆ ಎಂದು ಗುರುವಾರ ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ 12 ಗ್ರಾಮಗಳಲ್ಲಿ ಉಗ್ರರು ಅಡಗಿಕುಳಿತಿದಿದ್ದು, ತಮ್ಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆಂದು ಗುಪ್ತಚರ ಇಲಾಕೆ ಮಾಹಿತಿ ನೀಡಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ರೈಫಲ್ಸ್, ವಿಶೇಷ ಕಾರ್ಯಾಚರಣಾ ಪಡೆ ಹಾಗೂ ಸಿಆರ್'ಪಿಎಫ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ಪೊಲೀಸರು ಹೇಳಿದ್ದಾರೆ.
ಉಗ್ರರು ಅಡಗಿ ಕುಳಿತಿರುವ ಹಿನ್ನಲೆಯಲ್ಲಿ ಉಗ್ರರು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳದಂತೆ ಭಾರೀ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


