ಉದ್ಯಮಿಗಳನ್ನು ಸೃಷ್ಟಿಸಬೇಕು, ಉದ್ಯೋಗ ಹುಡುಕುವವರನ್ನಲ್ಲ: ವೆಂಕಯ್ಯ ನಾಯ್ಡು
ಸರ್ಕಾರಕ್ಕೆ ಉದ್ಯೋಗ ಸೃಷ್ಟಿ ಸವಾಲಾಗಿರುವ ಸಂದರ್ಭದಲ್ಲಿ ಯುವಕರನ್ನು ಉದ್ಯೋಗ ಹುಡುಕುವವರನ್ನಾಗಿ ಮಾಡುವುದಕ್ಕಿಂತ ಉದ್ಯಮಿಗಳನ್ನಾಗಿ ಮಾಡುವುದೇ ಸವಾಲಿನ ಸಂಗತಿ ಎಂದು ಉಪರಾಷ್ಟ್ರಪತಿ ವೆಂಕಯ್ಯ...

Published On :
ನವದೆಹಲಿ: ಸರ್ಕಾರಕ್ಕೆ ಉದ್ಯೋಗ ಸೃಷ್ಟಿ ಸವಾಲಾಗಿರುವ ಸಂದರ್ಭದಲ್ಲಿ ಯುವಕರನ್ನು ಉದ್ಯೋಗ ಹುಡುಕುವವರನ್ನಾಗಿ ಮಾಡುವುದಕ್ಕಿಂತ ಉದ್ಯಮಿಗಳನ್ನಾಗಿ ಮಾಡುವುದೇ ಸವಾಲಿನ ಸಂಗತಿ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಭಾರತದಲ್ಲಿ ಅಸಮಾನತೆ ಇದ್ದೇ ಇದೆ, ಆದ್ದರಿಂದ ಸಮಗ್ರ ಅಭಿವೃದ್ಧಿಯ ಕಡೆಗೆ ಗಮನ ಹರಿಸಬೇಕಿದೆ, ದಮನಕ್ಕೊಳಗಾದ, ತುಳಿತಕ್ಕೊಳಗಾದವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದು ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟಿದ್ದಾರೆ.
ಭಾರತೀಯ ಯುವ ಟ್ರಸ್ಟ್ ನ ರಜತ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿರುವ ವೆಂಕಯ್ಯ ನಾಯ್ಡು, ಯುವಜನತೆಯನ್ನು ಹೆಚ್ಚು ಉದ್ಯಮಿಗಳನ್ನಾಗಿಸಬೇಕು, ಉದ್ಯೋಗ ಹುಡುಕುವವರನ್ನಲ್ಲ, ಸ್ಟಾರ್ಟ್ ಅಪ್ ಇಂಡಿಯಾ, ಸ್ಟ್ಯಾಂಡ್ ಅಪ್ ಇಂಡಿಯಾ ಸೇರಿದಂತೆ ಹಲವು ಕ್ರಮಗಳ ಮೂಲಕ ಎನ್ ಡಿಎ ಸರ್ಕಾರ ಈ ನಿಟ್ಟಿನಲ್ಲಿ ಯುವಜನತೆಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


