ಕೇಜ್ರಿವಾಲ್ ಅರ್ಥಮಾಡಿಕೊಳ್ಳದೇ ಎಲ್ಲದರ ಬಗ್ಗೆಯೂ ಮಾತನಾಡುವ ವಿಚಿತ್ರ ವ್ಯಕ್ತಿ: ಅಮರಿಂದರ್ ಸಿಂಗ್
ದೆಹಲಿಯಲ್ಲಿ ಆವರಿಸಿರುವ ದಟ್ಟ ಮಂಜಿಗೆ ಸಂಬಂಧಿಸಿದಂತೆ ಟ್ವಿಟರ್ ನಲ್ಲಿ ದೆಹಲಿ ಸಿಎಂ ಜೊತೆ ಚರ್ಚೆ ಮಾಡಿದ್ದ ಅಮರಿಂದರ್ ಸಿಂಗ್ ಈಗ ದೆಹಲಿ ಸಿಎಂ ಕೇಜ್ರಿವಾಲ್ ಅವರನ್ನು ಎಲ್ಲಾ ವಿಷಯಗಳಲ್ಲಿಯೂ....

Published On :
ನವದೆಹಲಿ: ದೆಹಲಿಯಲ್ಲಿ ಆವರಿಸಿರುವ ದಟ್ಟ ಮಂಜಿಗೆ ಸಂಬಂಧಿಸಿದಂತೆ ಟ್ವಿಟರ್ ನಲ್ಲಿ ದೆಹಲಿ ಸಿಎಂ ಜೊತೆ ಚರ್ಚೆ ಮಾಡಿದ್ದ ಅಮರಿಂದರ್ ಸಿಂಗ್ ಈಗ ದೆಹಲಿ ಸಿಎಂ ಕೇಜ್ರಿವಾಲ್ ಅವರನ್ನು ಎಲ್ಲಾ ವಿಷಯಗಳಲ್ಲಿಯೂ ಅಭಿಪ್ರಾಯ ಹೊಂದಿರುವ ವಿಚಿತ್ರ ವ್ಯಕ್ತಿ ಎಂದು ಹೇಳಿದ್ದಾರೆ.
ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳದೇ ಎಲ್ಲದರ ಬಗ್ಗೆಯೂ ಮಾತನಾಡುವ ವಿಚಿತ್ರ ವ್ಯಕ್ತಿ ಕೇಜ್ರಿವಾಲ್ ಎಂದಿರುವ ಅಮರಿಂದರ್ ಸಿಂಗ್, 20 ಮಿಲಿಯನ್ ನಷ್ಟು ಭತ್ತದ ತ್ಯಾಜ್ಯವಿದೆ, ಅದನ್ನು ಎಲ್ಲಿ ಶೇಖರಣೆ ಮಾಡಿಕೊಳ್ಳಲು ರೈತರಿಗೆ ಹೇಳಬೇಕು, ಈ ಸಮಸ್ಯೆ ಕೇಜ್ರಿವಾಲ್ ಗೆ ಅರ್ಥವಾಗುವುದಿಲ್ಲ ಎಂದು ಹೇಳಿದ್ದಾರೆ.
ದೆಹಲಿಯಲ್ಲಿನ ವಾಯುಮಾಲಿನ್ಯ ಹಾಗೂ ದಟ್ಟ ಮಂಜು ಆವರಿಸಿರುವುದಕ್ಕೆ ಸಂಬಂಧಿಸಿದಂತೆ ಹರ್ಯಾಣ ಹಾಗೂ ಪಂಜಾಬ್ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಹಲವು ದಿನಗಳಿಂದ ಯತ್ನಿಸುತ್ತಿರುವುದಾಗಿ ಕೇಜ್ರಿವಾಲ್ ಟ್ವಿಟರ್ ನಲ್ಲಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಅಮರಿಂದರ್ ಸಿಂಗ್, ಈ ಸಮಸ್ಯೆಗೆ ಕೇಂದ್ರ ಸರ್ಕಾರದಿಂದಲೇ ಪರಿಹಾರ ಸಿಗಬೇಕು ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


