ಗುಜರಾತ್ ನಲ್ಲಿ ಮತ್ತೆ ಬಿಜೆಪಿಗೇ ಜಯ, ಆದ್ರೆ ಮತ ಗಳಿಕೆ ಪ್ರಮಾಣ ಕುಸಿತ: ಸಮೀಕ್ಷೆ
ತೀವ್ರ ಕುತೂಹಲ ಮೂಡಿಸಿರುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿಯೂ ಆಡಳಿತರೂಢ ಬಿಜೆಪಿ ಗೆಲುವು ಸಾಧಿಸುವ....

Published On :
ನವದೆಹಲಿ: ತೀವ್ರ ಕುತೂಹಲ ಮೂಡಿಸಿರುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿಯೂ ಆಡಳಿತರೂಢ ಬಿಜೆಪಿ ಗೆಲುವು ಸಾಧಿಸುವ ಮೂಲಕ ಮತ್ತೆ ಅಧಿಕಾರಕ್ಕೇರಲಿದೆ. ಆದರೆ ಮತ ಗಳಿಕೆ ಪ್ರಮಾಣ ಕುಸಿಯಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಯಿಂದ ಬಹಿರಂಗವಾಗಿದೆ.
ಮುಂದಿನ ತಿಂಗಳು ವಿಧಾನಸಭೆ ಚುನಾವಣೆಗೆ ಸಿದ್ಧವಾಗಿರುವ ಗುಜರಾತ್‌ನಲ್ಲಿ ಎಬಿಪಿ ನ್ಯೂಸ್-ಸಿಎಸ್‌ಡಿಎಸ್ ಸಂಸ್ಥೆ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು, ಬಿಜೆಪಿಯೇ ಅಧಿಕಾರ ಉಳಿಸಿಕೊಳ್ಳಲಿದೆ ಎಂದಿದೆ.
ಸಮೀಕ್ಷೆ ಪ್ರಕಾರ, ಬಿಜೆಪಿಗೆ 113-121, ಕಾಂಗ್ರೆಸ್‌ಗೆ 58-64 ಸ್ಥಾನಗಳು ಲಭಿಸಲಿವೆ. ಬಿಜೆಪಿಗೆ ಶೇ.47, ಕಾಂಗ್ರೆಸ್‌ಗೆ ಶೇ.41ರಷ್ಟು ಮತ ದೊರೆಯಲಿವೆ.
ಕಳೆದ ಆಗಸ್ಟ್ ನಲ್ಲಿ ನಡೆದ ಮೊದಲ ಸುತ್ತಿನ ಸಮೀಕ್ಷೆಯಲ್ಲಿ ಬಿಜೆಪಿ ಶೇ.59ರಷ್ಟು ಮತ ಗಳಿಸಿತ್ತು. ಆದರೆ ಅಕ್ಟೋಬರ್ ಕೊನೆಯ ವಾರದಲ್ಲಿ ನಡೆದ ಎರಡನೇ ಸಮೀಕ್ಷೆಯಲ್ಲಿ ಬಿಜೆಪಿ ಮತ ಗಳಿಕೆ ಪ್ರಮಾಣ ಶೇ.47ಕ್ಕೆ ಕುಸಿದಿದೆ. ಇನ್ನು ಮೊದಲ ಸುತ್ತಿನ ಸಮೀಕ್ಷೆಯಲ್ಲಿ ಶೇ.30ರಷ್ಟು ಮತ ಗಳಿಸಿದ್ದ ಕಾಂಗ್ರೆಸ್ ಎರಡನೇ ಸುತ್ತಿನಲ್ಲಿ ಶೇ.41ಕ್ಕೆ ಜಿಗಿದಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


