ದೇಶ

ಗುಜರಾತ್: ಪಾಕಿಸ್ತಾನದ 5 ದೋಣಿಗಳನ್ನು ವಶಕ್ಕೆ ಪಡೆದ ಭದ್ರತಾ ಪಡೆ

ಗುಜರಾತ್ ರಾಜ್ಯದಲ್ಲಿ ಪಾಕಿಸ್ತಾನದ ಮೂಲದ 5 ದೋಣಿಗಳನ್ನು ಗಡಿ ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದ್ದು, ಮೂವರು ಮೀನುಗಾರರನ್ನು ಬಂಧನಕ್ಕೊಳಪಡಿಸಿದ್ದಾರೆಂದು...

ಗುಜರಾತ್: ಪಾಕಿಸ್ತಾನದ 5 ದೋಣಿಗಳನ್ನು ವಶಕ್ಕೆ ಪಡೆದ ಭದ್ರತಾ ಪಡೆ
ಸಾಂದರ್ಭಿಕ ಚಿತ್ರ
Published On :
ಭುಜ್ (ಗುಜರಾತ್): ಗುಜರಾತ್ ರಾಜ್ಯದಲ್ಲಿ ಪಾಕಿಸ್ತಾನದ ಮೂಲದ 5 ದೋಣಿಗಳನ್ನು ಗಡಿ ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದ್ದು, ಮೂವರು ಮೀನುಗಾರರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶುಕ್ರವಾರ ತಿಳಿದಬಂದಿದೆ. 
ಭಾರತ ಮತ್ತು ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ಭುಜ್'ನ ಹರಮಿ ನಾಲಾದಲ್ಲಿ ಪಾಕಿಸ್ತಾನ ಮೂವರು ಮೀನುಗಾರರನ್ನು ಬಿಎಸ್ಎಫ್ ಪಡೆಗಳು ಬಂಧನಕ್ಕೊಳಪಡಿಸಿದ್ದು, 5 ಮೀನುಗಾರಿಕೆ ದೋಣಿಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ವರದಿಗಳು ತಿಳಿಸಿವೆ. 
ಪ್ರಸ್ತುತ ಸ್ಥಳದಲ್ಲಿ ಗಡಿ ಭದ್ರತಾ ಪಡೆಗಳು ಕಾರ್ಯಾಚರಣೆಗಳನ್ನು ಮುಂದುವರೆಸುತ್ತಿತವೆ ಎಂದು ಮೂಲಗಳಿಂದ ತಿಳಿದುಬಂದಿದೆ. 
ಕಳೆದ ತಿಂಗಳು ಕಚ್ ಜಿಲ್ಲೆಯಲ್ಲಿ ಪಾಕಿಸ್ತಾನ ಓರ್ವ ಮೀನುಗಾರನ್ನು ಬಂಧನಕ್ಕೊಳಪಡಿಸಲಾಗಿತ್ತು. ಅಲ್ಲದೆ, ಆತನ ದೋಣಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.