ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ: ಚೀನಾಗೆ ಭಾರತ ತಿರುಗೇಟು
ಅರುಣಾಚಲ ಪ್ರದೇಶಕ್ಕೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಚೀನಾಗೆ ಭಾರತ ತಿರುಗೇಟು ನೀಡಿದೆ...

Published On :
ನವದೆಹಲಿ: ಅರುಣಾಚಲ ಪ್ರದೇಶಕ್ಕೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಚೀನಾಗೆ ಭಾರತ ತಿರುಗೇಟು ನೀಡಿದೆ.
ನಿರ್ಮಲಾ ಸೀತಾರಾಮನ್ ಅವರು ಕೆಲ ದಿನಗಳ ಹಿಂದಷ್ಟೇ ಅರುಣಾಚಲ ಪ್ರದೇಶದ ಚೀನಾ ಗಡಿ ಸಮೀಪದ ಅಂಜಾವ್ ಜಿಲ್ಲೆಯ ಸೇನಾ ನೆಲೆಗಳಿಗೆ ಭೇಟಿ ನೀಡಿದ್ದರು. ಇದಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.
ವಿವಾದಿತ ಪ್ರದೇಶಕ್ಕೆ ನಿರ್ಮಲಾ ಅವರು ಭೇಟಿ ನೀಡಿರುವುದು ಈ ಭಾಗದ ಶಾಂತಿ ಸ್ಥಾಪನೆಯ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ. ಭಾರತದ ರಕ್ಷಣಾ ಸಚಿವರಾಗಿ ನಿರ್ಮಲಾ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುವುದಕ್ಕೂ ಮುನ್ನಾ ಚೀನಾದ ನಿಲುವಿನ ಕುರಿತು ಸ್ಪಷ್ಟವಾಗಿರಬೇಕಿತ್ತು ಎಂದು ಚೀನಾ ವಿದೇಶಾಂಗ ಇಲಾಖೆಯ ವಕ್ತಾರ ಹುವಾ ಚುನ್'ಯಿಂಗ್ ಅವರು ಹೇಳಿದ್ದರು.
ಚೀನಾದ ಈ ಆಕ್ಷೇಪಕ್ಕೆ ತಿರುಗೇಟು ನೀಡಿರುವ ಭಾರತ ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗವಾಗಿದ್ದು, ಅಲ್ಲಿನ ಯಾವುದೇ ಭಾಗಕ್ಕೆ ಭೇಟಿ ನೀಡಲು ಭಾರತೀಯ ನಾಯಕರು ಸ್ವತಂತ್ರರಾಗಿದ್ದಾರೆಂದು ಹೇಳಿದೆ.
ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದ ಬಗ್ಗೆ ಉಭಯ ದೇಶಗಳ ವಿಶೇಷ ಪ್ರತಿನಿಧಿಗಳ ಸಭೆ ಕುರಿತು ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ. ದೇಶದ ಇತರೆ ರಾಜ್ಯಗಳಿಗೆ ಭೇಟಿ ನೀಡಿದಂತೆ ಅರುಣಾಚಲ ಪ್ರದೇಶಕ್ಕೂ ತೆರಳಲು ಭಾರತದ ನಾಯಕರು ಸರ್ವ ಸ್ವತಂತ್ರರು ಎಂದು ಹೇಳಿದ್ದಾರೆ.
ಗಡಿ ವಿವಾದ ಸಂಬಂಧ ಮಾತುಕತೆ ಬಗ್ಗೆ ಉಭಯ ರಾಷ್ಟ್ರಗಳು ಸಂಪರ್ಕದಲ್ಲಿವೆ. ಆದರೆ, ಇನ್ನೂ ವಿಶೇಷ ಪ್ರತಿನಿಧಿಗಳ ಸಭೆಗ ದಿನಾಂಕ ನಿಗದಿಯಾಗಿಲ್ಲ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


